ನಾಲ್ಕು ವಿಶ್ವಕಪ್‌ಗಳಲ್ಲಿ ಪಾಲ್ಗೊಳ್ಳಲು ಭವಾನಿಗೆ ಕೇಂದ್ರ ಆರ್ಥಿಕ ನೆರವು
Team Udayavani, Dec 26, 2021, 6:55 AM IST
ನವದೆಹಲಿ: ಮುಂದಿನ ವರ್ಷ ನಡೆಯುವ ನಾಲ್ಕು ಪ್ರಮುಖ ಅಂತಾರಾಷ್ಟ್ರೀಯ ಕತ್ತಿವರಸೆ ಕೂಟಗಳಲ್ಲಿ ಪಾಲ್ಗೊಳ್ಳಲು ಭವಾನಿ ದೇವಿಗೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ದೊರಕಿದೆ.
ತರಬೇತಿ ಮತ್ತು ಸ್ಪರ್ಧೆಯ ವಾರ್ಷಿಕ ಯೋಜನೆಯಡಿ ಕೇಂದ್ರ ಸರ್ಕಾರ 8.16 ಲಕ್ಷ ರೂ. ಮೊತ್ತವನ್ನು ಮಂಜೂರು ಮಾಡಿದೆ. ಈ ಆರ್ಥಿಕ ನೆರವಿನಿಂದ ಭವಾನಿ ಅವರು ಜಾರ್ಜಿಯಾದಲ್ಲಿ ಜ.4ರಿಂದ ತರಬೇತಿ ಆರಂಭಿಸಲಿದ್ದಾರೆ. ಅದಾದ ನಂತರ ಜ.14ರಿಂದ 16ವರೆಗೆ ಜಾರ್ಜಿಯಾದ ಟಿಬಿಲಿಸಿಯಲ್ಲಿ ಕತ್ತಿವರಸೆ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿದ್ದಾರೆ.
ಜ.28-29ರಂದು ಬಲ್ಗೇರಿಯದ ಪ್ಲಾವ್ಡೀವ್‌ನಲ್ಲಿ ನಡೆಯುವ ವಿಶ್ವಕಪ್ ಭಾಗವಹಿಸಲಿದ್ದಾರೆ, ಹಾಗೆಯೇ ಗ್ರೀಸ್, ಬೆಲ್ಜಿಯಂಗಳಲ್ಲಿ ನಡೆಯುವ ವಿಶ್ವಕಪ್‌ಗ್ಳಲ್ಲೂ ಸ್ಪರ್ಧಿಸಲಿದ್ದಾರೆ. ಈ ವರ್ಷ ಟೋಕ್ಯೊದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭವಾನಿ ಸ್ಪರ್ಧಿಸಿ, ಅಲ್ಲಿ 32ರ ಸುತ್ತಿನಲ್ಲಿ ಸೋತಿದ್ದರು. ಅವರು ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ ಭಾರತದ ಮೊದಲ ಕತ್ತಿವರಸೆ ಸ್ಪರ್ಧಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.