Bajrang Punia ಆರ್ಥಿಕ ನೆರವಿಗೆ ಕ್ರೀಡಾ ಸಚಿವಾಲಯ ಒಪ್ಪಿಗೆ
Team Udayavani, Mar 26, 2024, 11:20 PM IST
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಲಭಿಸದೆ ಹೋದರೂ ಕುಸ್ತಿಪಟು ಬಜರಂಗ್ ಪೂನಿಯ ಅವರಿಗೆ ಆರ್ಥಿಕ ನೆರವು ನೀಡಲು ಕ್ರೀಡಾ ಸಚಿವಾಲಯ ಒಪ್ಪಿಗೆ ನೀಡಿದೆ. ಆರ್ಥಿಕ ನೆರವಿನ ಜತೆಗೆ ತನ್ನ “ಸ್ಟ್ರೆಂತ್ ಆ್ಯಂಡ್ ಕಂಡೀಶನಿಂಗ್’ ತರಬೇತುದಾರ ಖಾಜಿ ಕಿರಣ್ ಮುಸ್ತಫಾ ಹಸನ್ ಅವರ ಅವಧಿಯನ್ನು ಹೆಚ್ಚಿಸುವಂತೆ ಬಜರಂಗ್ ಕೋರಿದ್ದರು. ಇದಕ್ಕೂ ಸಚಿವಾಲಯ ಅನುಮೋದನೆ ನೀಡಿದೆ.
ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಸುದೀರ್ಘ ಪ್ರತಿಭಟನೆಯಲ್ಲಿ ಪಾಲ್ಗೊಂಡವರಲ್ಲಿ ಬಜರಂಗ್ ಪೂನಿಯ ಕೂಡ ಒಬ್ಬರಾಗಿದ್ದರು.
ಮುಂದಿನ ತಿಂಗಳು ನಡೆಯಲಿರುವ ಏಷ್ಯನ್ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಒಲಿಂಪಿಕ್ ಕ್ವಾಲಿಫೈಯರ್‌ಗಾಗಿ ತಂಡವನ್ನು ಆರಿಸಲು ನಡೆಸಲಾಗಿದ್ದ 65 ಕೆ.ಜಿ. ವಿಭಾಗದ ಟ್ರಯಲ್ಸ್‌ನಲ್ಲಿ ಅಗ್ರ 4 ಸ್ಥಾನ ಪಡೆಯಲು ಕೂಡ ಬಜರಂಗ್ ವಿಫಲರಾಗಿದ್ದರು. ಆದರೂ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ಗೆದ್ದ ಬಜರಂಗ್‌ಗೆ ಆರ್ಥಿಕ ಸಹಾಯ ನೀಡಲು ಕ್ರೀಡಾ ಸಚಿವಾಲಯ ಒಪ್ಪಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.