WFI; ಮುಗಿಯದ ಜಂಗಿಕುಸ್ತಿ; ರಾಷ್ಟ್ರೀಯ ಕುಸ್ತಿ ಫೆಡರೇಶನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ
Team Udayavani, Dec 24, 2023, 11:27 AM IST
ಹೊಸದಿಲ್ಲಿ: ರಾಷ್ಟ್ರೀಯ ಕುಸ್ತಿ ಫೆಡರೇಶನ್ ನ ಜಂಗಿ ಕುಸ್ತಿ ಮುಂದುವರಿದಿದೆ. ಇತ್ತೀಚೆಗಷ್ಟೇ ಚುನಾವಣೆ ನಡೆದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಗೆಲುವು ಸಾಧಿಸಿದ್ದರು. ಇದರ ಬೆನ್ನಲ್ಲೇ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ಮಾಡಿದ್ದ ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದರು. ಇದೀಗ ಕೇಂದ್ರ ಕ್ರೀಡಾ ಸಚಿವಾಲಯವು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ.
ಸಂಜಯ್ ಸಿಂಗ್ ನೇತೃತ್ವದ ಹೊಸ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.
ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಕುಸ್ತಿ ಫೆಡರೇಶನ್ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ಭಾನುವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ.
ಕ್ರೀಡಾ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ, ರಾಷ್ಟ್ರೀಯ ಸ್ಪರ್ಧೆಗಳ ಪ್ರಕಟಣೆಯು ತರಾತುರಿಯಲ್ಲಿತ್ತು ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ ಎಂದು ಹೇಳಿದೆ.
ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.