ಶ್ರೀಲಂಕಾ ಪ್ರವಾಸ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್‌ಗೆ ವಿಶ್ರಾಂತಿ
Team Udayavani, Jan 26, 2022, 5:30 AM IST
ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡ ಮುಂದಿನ ತಿಂಗಳು ಶ್ರೀಲಂಕಾಕ್ಕೆ ಪ್ರವಾಸ ಕೈಗೊಳ್ಳಲಿದ್ದು, 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ.
ಇದಕ್ಕಾಗಿ 16 ಸದಸ್ಯರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯ ಮಂಗಳವಾರ ಪ್ರಕಟಿಸಿದೆ. ಇಬ್ಬರು ಸ್ಟಾರ್ ಆಟಗಾರರನ್ನು ಈ ಸರಣಿಯಿಂದ ಹೊರಗಿಡಲಾಗಿದೆ.
ಇವರೆಂದರೆ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್. ಇತ್ತೀಚೆಗಷ್ಟೇ 4-0 ಅಂತರದಿಂದ ಆ್ಯಶಸ್ ಗೆದ್ದ ಸರಣಿಯಲ್ಲಿದ್ದ ಪ್ಯಾಟ್ ಕಮಿನ್ಸ್, ಸ್ಟೀವನ್ ಸ್ಮಿತ್,ಟ್ರ್ಯಾ ವಿಸ್ ಹೆಡ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್ ಮತ್ತೆ ಟಿ20 ತಂಡಕ್ಕೆ ವಾಪಾಸಾಗಿದ್ದಾರೆ. ವಾರ್ನರ್ ಮತ್ತು ಮಿಚೆಲ್ ಮಾರ್ಷ್‌ಗೆ ವಿಶ್ರಾಂತಿ ನೀಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯ ತಿಳಿಸಿದೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್ ಪಂದ್ಯ ಡ್ರಾ
“ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟ್ರೋಪಿಯನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ತಯಾರಿಯ ಆರಂಭ ಇದಾಗಿದೆ. ಬಲಿಷ್ಠ ಎದುರಾಳಿಯ ವಿರುದ್ಧ ಈ 5 ಪಂದ್ಯಗಳಲ್ಲಿ ಮಿಂಚಲು ಅನೇಕ ಯುವ ಆಟಗಾರರಿಗೂ ಈ ಸರಣಿ ಅವಕಾಶ ನೀಡಲಿದೆ’ ಎಂದು ಕ್ರಿಕೆಟ್ ಆಸ್ಟ್ರೇಲಿಯ ಪ್ರಕಟಣೆಯಲ್ಲಿ ತಿಳಿಸಿದೆ.ಶ್ರೀಲಂಕಾ ವಿರುದ್ಧದ ಟಿ20 ಸರಣಿ ಫೆ. 11ರಿಂದ 20ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.