ಭಾರತದತ್ತ ಹೊರಟಿತು ಲಂಕಾ ತಂಡ: ಜ.3ರಿಂದ 3 ಪಂದ್ಯಗಳ ಟಿ20, ಏಕದಿನ ಸರಣಿ
Team Udayavani, Dec 31, 2022, 10:37 PM IST
ಕೊಲಂಬೊ : ವರ್ಷಾರಂಭದ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿ ಗಾಗಿ ಶ್ರೀಲಂಕಾ ತಂಡ ಶನಿವಾರ ಕೊಲಂಬೊದಿಂದ ಭಾರತಕ್ಕೆ ಪ್ರಯಾಣ ಬೆಳೆಸಿತು.
ಆರಂಭದಲ್ಲಿ 3 ಪಂದ್ಯಗಳ ಟಿ20 ಸರಣಿ, ಬಳಿಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಲಂಕಾ ತಂಡ ಪಾಲ್ಗೊ ಳ್ಳಲಿದೆ. ಜ. 3-15ರ ಅವಧಿಯಲ್ಲಿ ಈ ಪಂದ್ಯಗಳು ನಡೆಯಲಿವೆ.
ಕೊಲಂಬೊದ ಶ್ರೀಲಂಕಾ ಕ್ರಿಕೆಟ್‌ನ ಪ್ರಧಾನ ಕಚೇರಿಯಲ್ಲಿ ನೆರೆದ ದಸುನ್ ಶಣಕ ನಾಯಕತ್ವದ ತಂಡ, ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಪೋಸ್ಟ್ ಮಾಡಿದೆ. ಈ ಸಂದ ರ್ಭದಲ್ಲಿ ಆಲ್‌ರೌಂಡರ್ ವನಿಂದು ಹಸರಂಗ ಮಾಧ್ಯಮದವರೊಂದಿಗೆ ಮಾತಾಡಿದರು.
ಲಂಕೆಗೆ ಪ್ರತಿಷ್ಠೆಯ ಸರಣಿ
ಹಾಲಿ ಏಷ್ಯಾ ಕಪ್ ಟಿ20 ಚಾಂಪಿಯನ್ ಆಗಿರುವ ಶ್ರೀಲಂಕಾಕ್ಕೆ ಇದೊಂದು ಪ್ರತಿಷ್ಠೆಯ ಸರಣಿ. ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ್ ಪಂತ್, ಭುವನೇಶ್ವರ್ ಕುಮಾರ್ ಮೊದಲಾದ ಪ್ರಮುಖ ಆಟಗಾರರು ಟೀಮ್ ಇಂಡಿಯಾದಿಂದ ಬೇರ್ಪಟ್ಟಿದ್ದಾರೆ. ಇದರ ಲಾಭವನ್ನೆತ್ತಲು ಲಂಕೆಯಿಂದ ಸಾಧ್ಯವೇ ಎಂಬುದೊಂದು ಕುತೂಹಲ.
ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುವರು. ಟಿ20 ತಂಡದ “ಫುಲ್‌ಟೈಮ್ ಕ್ಯಾಪ್ಟನ್’ ಆಗಿ ಮುಂದುವರಿಸುವ ಯೋಜನೆ ಇರುವುದರಿಂದ ಪಾಂಡ್ಯ ನಾಯಕತ್ವಕ್ಕೆ ಇದೊಂದು ಅಗ್ನಿಪರೀಕ್ಷೆ. ಶುಭಮನ್ ಗಿಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಮುಕೇಶ್ ಕುಮಾರ್, ಶಿವಂ ಮಾವಿ ಮೊದಲಾದ ಯುವ ಆಟಗಾರರನ್ನು ಈ ತಂಡ ಒಳಗೊಂಡಿದೆ. ಹಿರಿಯರ ಗೈರಲ್ಲಿ ಲಭಿಸಿದ ಅವಕಾಶವನ್ನು ಇವರು ಬಳಸಿಕೊಳ್ಳಬೇಕಿದೆ.
ಮುಂಬಯಿ, ಪುಣೆ ಮತ್ತು ರಾಜ್‌ಕೋಟ್‌ನಲ್ಲಿ ಟಿ20 ಪಂದ್ಯಗಳನ್ನು ಆಡಲಾಗುವುದು. ಏಕದಿನ ಪಂದ್ಯಗಳ ತಾಣ ಗುವಾಹಟಿ, ಕೋಲ್ಕತಾ ಮತ್ತು ತಿರುವನಂತಪುರ.
2022ರಲ್ಲಿ ಭಾರತಕ್ಕೆ ಪ್ರವಾಸ ಬಂದಿದ್ದ ಶ್ರೀಲಂಕಾ ಹೀನಾಯ ಸೋಲುಂಡಿತ್ತು. ಟೆಸ್ಟ್ ಸರಣಿಯನ್ನು 2-0 ಹಾಗೂ ಟಿ20 ಸರಣಿಯನ್ನು 3-0 ಕ್ಲೀನ್‌ಸ್ವೀಪ್ ಆಗಿ ಕಳೆದುಕೊಂಡಿತ್ತು. ಇದಕ್ಕೆ ಸೇಡು ತೀರಿಸಲು ಲಂಕೆಗೆ ಸಾಧ್ಯವೇ ಎಂಬುದೂ ಒಂದು ಪ್ರಶ್ನೆ.
ಈ ಬಾರಿ ಶ್ರೀಲಂಕಾ ತಂಡ ದುಷ್ಮಂತ ಚಮೀರ ಅವರ ಸೇವೆಯನ್ನು ಕಳೆದುಕೊಳ್ಳುತ್ತಿದೆ. ತಂಡ 20 ಸದಸ್ಯರನ್ನು ಹೊಂದಿದ್ದು, ಟಿ20ಗೆ ವನಿಂದು ಹಸರಂಗ ಹಾಗೂ ಏಕದಿನಕ್ಕೆ ಕುಸಲ್ ಮೆಂಡಿಸ್ ಉಪನಾಯಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.