ಬಿಸಿಸಿಐ ಸಭೆಯಲ್ಲಿ ಅನರ್ಹರಾದ ಶ್ರೀನಿ, ಶಾಗೇನು ಕೆಲಸ?
Team Udayavani, Jul 15, 2017, 3:05 AM IST
ಹೊಸದಿಲ್ಲಿ: ಬಿಸಿಸಿಐನ ಆಡಳಿತಾತ್ಮಕ ಸುಧಾರಣೆಗಳಿಗೆ ಸಂಬಂಧಪಟ್ಟಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಶುಕ್ರವಾರ ಅತ್ಯಂತ ಮಹತ್ವದ ವಿಚಾರಣೆ ನಡೆಯಿತು. ನ್ಯಾಯಪೀಠದ ಆದೇಶದ ಪ್ರಕಾರ ಅನರ್ಹಗೊಂಡಿದ್ದರೂ ಎನ್.ಶ್ರೀನಿವಾಸನ್ ಮತ್ತು ನಿರಂಜನ್ ಶಾ ಬಿಸಿಸಿಐ ಸಭೆಯಲ್ಲಿ ಪಾಲ್ಗೊಂಡಿದ್ದೇಕೆ? ವಿವರಣೆ ನೀಡಿ ಎಂದು ನ್ಯಾಯಪೀಠ ಸೂಚಿಸಿದೆ. ಜು.24ಕ್ಕೆ ನಡೆಯುವ ಮುಂದಿನ ವಿಚಾರಣೆಯಲ್ಲಿ ಶ್ರೀನಿ, ನಿರಂಜನ್ ತಮ್ಮನ್ನು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿದ್ದಾರೆ.
ಇತ್ತೀಚೆಗಷ್ಟೇ ತನ್ನ ನಾಲ್ಕನೇ ವರದಿ ಸಲ್ಲಿಸಿದ್ದ ಸುಪ್ರೀಂ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳು, ನ್ಯಾಯಪೀಠದ ಆದೇಶ ಜಾರಿಗೆ ಶ್ರೀನಿ, ನಿರಂಜನ್ ಅವರೇ ಕೊಕ್ಕೆ ಹಾಕುತ್ತಿದ್ದಾರೆ. ಅವರಿಬ್ಬರಿಗೆ ಸ್ವಹಿತಾಸಕ್ತಿ ಇದೆ ಎಂದು ಆರೋಪಿಸಿದ್ದರು. ನ್ಯಾಯಪೀಠದ 70 ವರ್ಷದ ವಯೋಮಿತಿ ನಿಬಂಧನೆ ಪ್ರಕಾರ, ಈ ಇಬ್ಬರೂ ಅನರ್ಹಗೊಳ್ಳುತ್ತಾರೆ. ಆದ್ದರಿಂದ ಅವರು ಮತ್ತೆ ಬಿಸಿಸಿಐನ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೂ ಇಬ್ಬರು ಬಿಸಿಸಿಐ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದು ಆಡಳಿತಾಧಿಕಾರಿಗಳನ್ನು ಕೆರಳಿಸಿದೆ.
ನ್ಯಾಯಾಂಗ ನಿಂದನೆಯಿಂದ ಅನುರಾಗ್ ಪಾರು
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕ್ರಿಮಿನಲ್ ವಿಚಾರಣೆ ಎದುರಿಸುತ್ತಿದ್ದ ಬಿಸಿಸಿಐ ಪದಚ್ಯುತ ಅಧ್ಯಕ್ಷ ಅನುರಾಗ್ ಠಾಕೂರ್ ನಿಟ್ಟುಸಿರು ಬಿಟ್ಟಿದ್ದಾರೆ. ತರ್ಕಗಳಿಗೆ ಆಸ್ಪದವಿಲ್ಲದಂತೆ, ಬೇಷರತ್ ಕ್ಷಮೆಯಾಚನೆ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಪೀಠ ಅವರ ಮೇಲಿನ ವಿಚಾರಣೆ ಕೈಬಿಟ್ಟಿದೆ. ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆಗಳನ್ನು ಘೋಷಿಸಿ ನ್ಯಾಯಪೀಠ 2016ರಲ್ಲಿ ತೀರ್ಪು ನೀಡಿತ್ತು.
ಅದಾದ ಮೇಲೆ ಐಸಿಸಿಯನ್ನು ಸಂಪರ್ಕಿಸಿದ್ದ ಅನುರಾಗ್, ಈ ಸುಧಾರಣೆಗಳನ್ನು ಅಳವಡಿಸಿಕೊಂಡರೆ ಬಿಸಿಸಿಐಯನ್ನು ಅಮಾನತು ಮಾಡಬೇಕಾಗುತ್ತದೆ ಎಂಬ ಪತ್ರ ನೀಡಿ ಎಂದು ಮನವಿ ಮಾಡಿದ್ದರು. ಇದನ್ನು ಸ್ವತಃ ಐಸಿಸಿಯೇ ಬಯಲು ಮಾಡಿತ್ತು. ಇದರಿಂದ ಕೆರಳಿದ ನ್ಯಾಯಪೀಠ ಅನುರಾಗ್‌ರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.