ದೆಹಲಿಯ ಜೇಟ್ಲಿ ಕ್ರೀಡಾಂಗಣದಲ್ಲಿ ರೋಹಿತ್ ಗಾಗಿ ಕಾದಿದೆ ಈ ಎರಡು ದಾಖಲೆಗಳು
Team Udayavani, Nov 3, 2019, 2:38 PM IST
ನವದೆಹಲಿ: ಟೀಂ ಇಂಡಿಯಾ ಇಂದು ಬಾಂಗ್ಲಾದೇಶದ ವಿರುದ್ಧ ಪ್ರಥಮ ಟಿ20 ಪಂದ್ಯವನ್ನು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಳಿದೆ. ಭಾರತ ಕಳೆದ ಎಂಟು ಟಿ20 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ್ದು ಇಂದಿನ ಹೋರಾಟದಲ್ಲೂ ಬಾಂಗ್ಲಾ ಹುಲಿಗಳಿಗೆ ಮಣ್ಣು ಮುಕ್ಕಿಸಿದರೆ ಟಿ20 ಕಾದಾಟದಲ್ಲಿ ಭಾರತ ಬಾಂಗ್ಲಾ ವಿರುದ್ಧ ಸತತ 09 ಪಂದ್ಯಗಳನ್ನು ಗೆದ್ದಂತಾಗುತ್ತದೆ.
ಇನ್ನು ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಇನ್ ಫಾರ್ಮ್ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಶರ್ಮಾ ಅವರು ಇಂದಿನ ಪಂದ್ಯದಲ್ಲಿ ಎರಡು ವಿಶಿಷ್ಟ ದಾಖಲೆಗಳಿಗೆ ಸಾಕ್ಷಿಯಾಗುವ ಅವಕಾಶವನ್ನು ಹೊಂದಿದ್ದಾರೆ.
ಭಾರತದ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ಆಟಗಾರ ಎಂಬ ಹೆಗ್ಗಳಿಗೆ ಪಾತ್ರರಾಗಲು ಶರ್ಮಾ ಅವರಿಗೆ ಇನ್ನೊಂದು ಪಂದ್ಯವಷ್ಟೇ ಉಳಿದಿದೆ. ಸದ್ಯ ಟಿಂ ಇಂಡಿಯಾದ ಮಾಜೀ ಕಪ್ತಾನ ಮಹೇಂದ್ರ ಸಿಂಗ್ ಧೋನಿ ಅವರ ಹೆಸರಿನಲ್ಲಿದೆ. ಧೋನಿ ಅವರು ಟೀಂ ಇಂಡಿಯಾ ಪರ 98 ಪಂದ್ಯಗಳನ್ನು ಆಡಿದ್ದಾರೆ ಮತ್ತು ರೋಹಿತ್ ಅವರು ಇಂದಿನ ಪಂದ್ಯವನ್ನು ಆಡುವ ಮೂಲಕ 99 ಪಂದ್ಯಗಳನ್ನು ಆಡಿದಂತಾಗುತ್ತದೆ.
ರೋಹಿತ್ ಶರ್ಮಾ ಅವರು 2007ರಲ್ಲಿ ಟಿ20 ವಿಶ್ವಕಪ್ ಮೂಲಕ ತಮ್ಮ ಪ್ರಥಮ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಸದ್ಯಕ್ಕೆ ವಿಶ್ವಕ್ರಿಕೆಟ್ ನಲ್ಲಿ ಅತೀ ಹೆಚ್ಚು ಅಂತಾರಾಷ್ಟ್ರೀಯ ಟಿ 20 ಪಂದ್ಯಗಳನ್ನು ಆಡಿರುವ ದಾಖಲೆ ಪಾಕಿಸ್ಥಾನದ ಶೊಯಬ್ ಮಲಿಕ್ ಅವರ ಹೆಸರಿನಲ್ಲಿದೆ ಮಲಿಕ್ ಅವರು 111 ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರ ನಂತರದ ಸ್ಥಾನದಲ್ಲಿರುವ ಶಾಹಿದ್ ಅಫ್ರಿದಿ ಅವರು 99 ಪಂದ್ಯಗಳನ್ನು ಆಡಿದ್ದಾರೆ.
ಇಂದಿನ ಪಂದ್ಯದಲ್ಲಿ ಇನ್ನೊಂದು ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವ ಅವಕಾಶವೂ ಶರ್ಮಾ ಅವರ ಪಾಲಿಗಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಲು ಶರ್ಮಾ ಅವರಿಗೆ ಕೇವಲ 08 ರನ್ನುಗಳ ಕೊರತೆಯಿದೆ. ಸದ್ಯಕ್ಕೆ ಈ ದಾಖಲೆ ಭಾರತೀಯ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದೆ.
ವಿರಾಟ್ ಕೊಹ್ಲಿ ಅವರು 72 ಟಿ20 ಪಂದ್ಯಗಳಿಂದ 2450 ರನ್ನುಗಳನ್ನು ಗಳಿಸಿದ್ದಾರೆ. ಶರ್ಮಾ ಅವರು 98 ಪಂದ್ಯಗಳನ್ನು ಆಡಿ 2443 ರನ್ನುಗಳನ್ನು ಗಳಿಸಿದ್ದಾರೆ.
ಬಾಂಗ್ಲಾ ಎದುರಿನ ಟಿ20 ಸರಣಿಗಾಗಿ ಕಪ್ತಾನ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿಯನ್ನು ನೀಡಲಾಗಿದ್ದು ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಏಷ್ಯಾ ಕಪ್ ನಲ್ಲೂ ಶರ್ಮಾ ಅವರು ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.