Steven Smith; ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ನಾಯಕನಾದ ಸ್ಟೀವ್ ಸ್ಮಿತ್
Team Udayavani, Jan 10, 2024, 12:31 PM IST
ಕ್ಯಾನ್ ಬೆರಾ: ಆಸ್ಟ್ರೇಲಿಯಾ ಬುಧವಾರ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಮತ್ತು ಏಕದಿನ ಸರಣಿಗೆ ತಮ್ಮ ತಂಡವನ್ನು ಹೆಸರಿಸಿದೆ. ಹಿರಿಯ ಆಟಗಾರ ಸ್ಟೀವ್ ಸ್ಮಿತ್ ಅವರು ಆಸ್ಟ್ರೇಲಿಯಾ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.
ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಅಡಿಲೇಡ್ ಓವಲ್ ನಲ್ಲಿ ಜನವರಿ 17 ರಿಂದ ಬುಧವಾರ ಪ್ರಾರಂಭವಾಗುವ ಆರಂಭಿಕ ಟೆಸ್ಟ್‌ನಲ್ಲಿ ಆಡುವುದನ್ನು ಖಚಿತಪಡಿಸಿದ್ದಾರೆ. ಇತ್ತೀಚೆಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ಪಾಕಿಸ್ತಾನದ ವಿರುದ್ಧ ವಿದಾಯದ ಟೆಸ್ಟ್ ನಲ್ಲಿ ಆಡಿದ ಡೇವಿಡ್ ವಾರ್ನರ್ ಬದಲಿಗೆ ಗ್ರೀನ್ ಅವರನ್ನು ತಂಡಕ್ಕೆ ಕರೆಸಲಾಗಿದೆ. ಎಡಗೈ ಬ್ಯಾಟರ್ ಮ್ಯಾಟ್ ರೆನ್‌ಶಾ ಕೂಡ ತಂಡಕ್ಕೆ ಮರಳಿದರು.
ವಾರ್ನರ್ ಅವರಿಂದ ತೆರವಾದ ಆರಂಭಿಕನ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ಆಡಲಿದ್ದಾರೆ. ಸ್ಮಿತ್ ಅವರು ಆಡುತ್ತಿದ್ದ ನಾಲ್ಕನೇ ಕ್ರಮಾಂಕದಲ್ಲಿ ಕ್ಯಾಮರೂನ್ ಗ್ರೀನ್ ಅವರು ಆಡಲಿದ್ದಾರೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಜಾರ್ಜ್ ಬೈಲಿ ಹೇಳಿದ್ದಾರೆ.
ಸ್ಮಿತ್ ಟೆಸ್ಟ್ ಕ್ರಿಕೆಟ್ ನಲ್ಲಿ ನಂ.3 ರಿಂದ ನಂ.9 ರವರೆಗೆ ಬ್ಯಾಟಿಂಗ್ ಮಾಡಿದ್ದಾರೆ, ಆದರೆ ಇದುವರೆಗೆ ಆರಂಭಿಕರಾಗಿ ಆಡಿಲ್ಲ.
ಆಸ್ಟ್ರೇಲಿಯಾ ಟೆಸ್ಟ್ ತಂಡ
ಪ್ಯಾಟ್ ಕಮ್ಮಿನ್ಸ್ (ನಾ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್ ವುಡ್, ಟ್ರಾವಿಸ್ ಹೆಡ್ (ಉ.ನಾ), ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಮ್ಯಾಥ್ಯೂ ರೆನ್ ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.
ಆಸ್ಟ್ರೇಲಿಯಾ ಏಕದಿನ ತಂಡ
ಸ್ಟೀವ್ ಸ್ಮಿತ್ (ನಾ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್ (ಉ.ನಾ), ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಲ್ಯಾನ್ಸ್ ಮೋರಿಸ್, ಜೇ ರಿಚರ್ಡ್ಸನ್, ಮ್ಯಾಟ್ ಶಾರ್ಟ್, ಆಡಮ್ ಝಂಪಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.