ಇಂಗ್ಲೆಂಡ್ ಏಕದಿನ ತಂಡದಲ್ಲಿ ಬೆನ್ ಸ್ಟೋಕ್ಸ್, ಅಲೆಕ್ಸ್ ಹೇಲ್ಸ್
Team Udayavani, Dec 8, 2017, 1:25 PM IST
ಲಂಡನ್: ನೈಟ್ ಕ್ಲಬ್ ಪ್ರಕರಣದಲ್ಲಿ ಸಿಲುಕಿ ಆ್ಯಶಸ್ ಸರಣಿಯಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯ ವಿರುದ್ಧ ಆಡಲಾಗುವ 5 ಪಂದ್ಯಗಳ ಏಕದಿನ ಸರಣಿಗೆಂದು ಪ್ರಕಟಿಸಲಾದ ಏಕದಿನ ತಂಡದಲ್ಲಿ ಸ್ಟೋಕ್ಸ್ ಅವಕಾಶ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಲೆಕ್ಸ್ ಹೇಲ್ಸ್ ಸೇರ್ಪಡೆ
ಪ್ರಕರಣದ ಪ್ರಮುಖ ಸಾಕ್ಷಿಯಾಗಿ ವಿಚಾರಣೆಗೊಳಗಾಗಿದ್ದ ಆರಂಭಕಾರ ಅಲೆಕ್ಸ್ ಹೇಲ್ಸ್ ಅವರನ್ನೂ ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇವರಿಬ್ಬರೂ ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ ಕೊನೆಯ 2 ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದರು. ಹೇಲ್ಸ್ ವಿರುದ್ಧ ಇನ್ನು ಯಾವುದೇ ವಿಚಾರಣೆ ಇಲ್ಲ ಎಂದು ಇಸಿಬಿ ತಿಳಿಸಿದೆ. ಆದರೆ ಸ್ಟೋಕ್ಸ್ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಹೀಗಾಗಿ ತಂಡಕ್ಕೆ ಮರಳಿದರೂ ಅವರು ಆಡುವುದು ಖಾತ್ರಿಯಾಗಿಲ್ಲ.
5 ಪಂದ್ಯಗಳ ಏಕದಿನ ಸರಣಿ ಜ. 14ರಿಂದ ಮೆಲ್ಬರ್ನ್ನಲ್ಲಿ ಆರಂಭ ವಾಗಲಿದೆ. ಟೆಸ್ಟ್ ಸರಣಿಯ ಮೊದಲೆರಡೂ ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ಡಿ. 9-10ರಂದು ಆಸ್ಟ್ರೇಲಿಯ ಇಲೆವೆನ್ ವಿರುದ್ಧ ಆಭ್ಯಾಸ ಪಂದ್ಯವನ್ನು ಆಡಲಿದೆ. ಆಬಳಿಕ ಸರಣಿಯ ಮೂರನೇ ಟೆಸ್ಟ್ ಪರ್ತ್‌ನಲ್ಲಿ ನಡೆಯಲಿದೆ (ಡಿ. 14-18).
ಇಂಗ್ಲೆಂಡ್ ತಂಡ
ಎವೋನ್ ಮಾರ್ಗನ್ (ನಾಯಕ), ಜಾಸನ್ ರಾಯ್, ಜಾನಿ ಬೇರ್‌ಸ್ಟೊ, ಅಲೆಕ್ಸ್ ಹೇಲ್ಸ್, ಜೋ ರೂಟ್, ಸ್ಯಾಮ್ ಬಿಲ್ಲಿಂಗ್ಸ್, ಜಾಸ್ ಬಟ್ಲರ್, ಬೆನ್ ಸ್ಟೋಕ್ಸ್, ಕ್ರಿಸ್ ವೋಕ್ಸ್, ಮೊಯಿನ್ ಅಲಿ, ಆದಿಲ್ ರಶೀದ್, ಡೇವಿಡ್ ವಿಲ್ಲಿ, ಲಿಯಮ್ ಪ್ಲಂಕೆಟ್, ಟಾಮ್ ಕರನ್, ಮಾರ್ಕ್ ವುಡ್, ಜೇಕ್ ಬಾಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.