Sub-Junior ರಾಷ್ಟ್ರೀಯ ಹಾಕಿ ತಂಡ ರಚನೆ; ಸರ್ದಾರ್,ರಾಣಿ ರಾಂಪಾಲ್ ಕೋಚ್‌ಗಳಾಗಿ ಆಯ್ಕೆ
Team Udayavani, Aug 10, 2023, 11:34 PM IST
ಚೆನ್ನೈ: ಯುವಕರು ಹಾಕಿ ಕ್ರೀಡೆಯತ್ತ ಆಕರ್ಷಿಸುವ ನಿಟ್ಟಿನಲ್ಲಿ ಹಾಕಿ ಇಂಡಿಯಾ ದಿಟ್ಟ ಹೆಜ್ಜೆ ಇಟ್ಟಿದೆ. ಬಾಲಕ-ಬಾಲಕಿಯರಿಗಾಗಿ ಸಬ್ ಜೂನಿಯರ್ (ಅಂಡರ್-17) ರಾಷ್ಟ್ರೀಯ ಹಾಕಿ ತಂಡಗಳನ್ನು ರಚಿಸುವುದಾಗಿ ಹಾಕಿ ಇಂಡಿಯಾ ಪ್ರಕಟಿಸಿದೆಯಲ್ಲದೇ ಈ ತಂಡಗಳಿಗೆ ಮಾಜಿ ನಾಯಕರಾದ ಸರ್ದಾರ್ ಸಿಂಗ್ ಮತ್ತು ರಾಣಿ ರಾಂಪಾಲ್ ಅವರನ್ನು ಕೋಚ್‌ಗಳಾಗಿ ನೇಮಿಸಿದೆ.
ಸದ್ಯ ಸಾಗುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ವೇಳೆ ಹಾಕಿ ಇಂಡಿಯಾ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕರೂ ಆಗಿರುವ ದಿಲೀಪ್ ತಿರ್ಕೆ ಅವರು ಈ ವಿಷಯವನ್ನು ಪ್ರಕಟಿಸಿದರು. ಕೋಚ್ ನಿಯಮದಲ್ಲಿ ಕೆಲವೊಂದು ಬದಲಾವಣೆ ತರಲು ಉದ್ದೇಶಿಸಲಾಗಿದೆ. ತಳಮಟ್ಟದಿಂದಲೇ ಯುವಕರಿಗೆ ಹಾಕಿ ಕ್ರೀಡೆಯ ಬಗ್ಗೆ ಆಸಕ್ತಿ ವಹಿಸಲು ಪ್ರಯತ್ನಿಸಲಾಗುವುದು. ಇಂತಹ ಪ್ರಯತ್ನ ಹಾಕಿ ಇಂಡಿಯಾದ ಇತಿಹಾಸದಲ್ಲಿ ಇದೇ ಮೊದಲ ಸಲ ಮಾಡಲಾಗುತ್ತಿದೆ ಎಂದವರು ಹೇಳಿದರು.
ಕೆಲವೊಂದು ಸಮಯದಿಂದ ನಾವು ಅಂಡರ್-21 ಮಟ್ಟದ ಹಾಕಿ ಸ್ಪರ್ಧೆಗಳಿಗೆ ಪ್ರಾಮುಖ್ಯ ನೀಡುತ್ತಿದ್ದೆವು. ಇದೀಗ ಸಬ್ ಜೂನಿಯರ್ ಹಂತಕ್ಕೂ ಪ್ರಾಮುಖ್ಯ ನೀಡಲು ನಿರ್ಧರಿಸಿದ್ದೇವೆ. ಈ ಕಾರಣಕ್ಕೆ ಸಬ್ ಜೂನಿಯರ್ ತಂಡಗಳನ್ನು ಆಯ್ಕೆ ಮಾಡಲಾಗುವುದು. ಯುವಕರು ಹಾಕಿ ಕ್ರೀಡೆಯತ್ತ ಆಸಕ್ತಿ ವಹಿಸಲು ಅವಕಾಶ, ವೇದಿಕೆ ಕಲ್ಪಿಸಲಾಗುವುದು ಎಂದವರು ತಿಳಿಸಿದರು.
ಸಬ್ ಜೂನಿಯರ್ ತಂಡಗಳಿಗೆ ವಿಶೇಷ ತರಬೇತಿ ಶಿಬಿರ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಆ. 21ರಿಂದ ಆರಂಭವಾಗುವ ಶಿಬಿರವು 45ರಿಂದ 50 ದಿನ ಇರಲಿದೆ. ಅದಲ್ಲದೇ ಯುರೋಪ್, ಬೆಲ್ಜಿಯಂ, ನೆದರ್ಲೆಂಡ್ಸ್‌ನಲ್ಲಿ ಪಂದ್ಯಗಳನ್ನು ನಡೆಸಲಾಗುವುದು. ಪ್ರತಿ ಶಿಬಿರಕ್ಕೆ 40 ಆಟಗಾರರನ್ನು ಆಯ್ಕೆ ಮಾಡಲಾಗುವುದು ಎಂದವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.