ಸುಲ್ತಾನ್‌ ಅಜ್ಲಾನ್‌ ಷಾ ಹಾಕಿ: ಭಾರತದಿಂದ ಉತ್ತಮ ಹೋರಾಟ; ಸರ್ದಾರ್‌

Team Udayavani, Mar 1, 2018, 6:55 AM IST

Sardar-Singh-282015.jpg

ಹೊಸದಿಲ್ಲಿ: ಶನಿವಾರದಿಂದ ಮಲೇಶ್ಯದಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಸುಲ್ತಾನ್‌ ಅಜ್ಲಾನ್‌ ಷಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತ ಉತ್ತಮ ಹೋರಾಟ ನೀಡಲಿದೆ ಎಂದು ನಾಯಕ ಸರ್ದಾರ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಕೆಲವು ವಿದೇಶಿ ಸರಣಿಗಳಲ್ಲಿ ತಂಡ ಗಮನಾರ್ಹ ಪ್ರದರ್ಶನ ನೀಡಿದ್ದೇ ಸರ್ದಾರ್‌ ಅವರ ಆತ್ಮವಿಶ್ವಾಸಕ್ಕೆ ಕಾರಣ. ಭಾರತ ತನ್ನ ಶನಿವಾರದ ಆರಂಭಿಕ ಪಂದ್ಯದಲ್ಲಿ ಒಲಿಂಪಿಕ್‌ ಚಾಂಪಿಯನ್‌ ಆರ್ಜೆಂಟೀನಾವನ್ನು ಎದುರಿಸಲಿದೆ. ವಿಶ್ವದ ನಂ.1 ತಂಡವಾದ ಆಸ್ಟ್ರೇಲಿಯ ಕೂಡ ಕಣದಲ್ಲಿದೆ. ಇಂಗ್ಲೆಂಡ್‌, ಅಯರ್‌ಲ್ಯಾಂಡ್‌ ಮತ್ತು ಆತಿಥೇಯ ಮಲೇಶ್ಯ ಈ ಕೂಟದಲ್ಲಿ ಪಾಲ್ಗೊಳ್ಳಲಿರುವ ಇತರ ತಂಡಗಳು.

“ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸುವುದು ಮುಖ್ಯ. ಇದು ನಮ್ಮ ಮೊದಲ ಗುರಿಯೂ ಹೌದು. ಆರ್ಜೆಂಟೀನಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದರೆ ತಂಡದ ಆತ್ಮವಿಶ್ವಾಸ ಖಂಡಿತ ವೃದ್ಧಿಯಾಗಲಿದೆ. ಫೈನಲ್‌ ತಲುಪಬೇಕಾದರೆ ಗ್ರೂಪ್‌ ಹಂತದ ಪ್ರತಿಯೊಂದು ಪಂದ್ಯವೂ ಮುಖ್ಯ. ಹಿಂದೆ ನಾವು ಆಸ್ಟ್ರೇಲಿಯ, ಇಂಗ್ಲೆಂಡ್‌ ತಂಡಗಳನ್ನು ಸೋಲಿಸಿದ್ದೇವೆ. ಆರ್ಜೆಂಟೀನಾವನ್ನೂ ಮಣಿಸಿದ್ದೇವೆ. ತಂಡದ ಯೋಜನೆ ಹಾಗೂ ಕಾರ್ಯತಂತ್ರವನ್ನು ಪರಿಪೂರ್ಣ ರೀತಿಯಲ್ಲಿ ಜಾರಿಗೆ ತರುವುದು ಅತ್ಯಗತ್ಯ’ ಎಂದು ತಂಡ ಮಲೇಶ್ಯಕ್ಕೆ ವಿಮಾನವೇರುವ ಮುನ್ನ ಸರ್ದಾರ್‌ ಸಿಂಗ್‌ ಮಾಧ್ಯಮದವರಲ್ಲಿ ಹೇಳಿದರು.

ಕಳೆದ ಸಲದ ಸುಲ್ತಾನ್‌ ಅಜ್ಲಾನ್‌ ಷಾ ಹಾಕಿ ಪಂದ್ಯಾವಳಿಯಲ್ಲಿ ಭಾರತ 4-0 ಅಂತರದಿಂದ ನ್ಯೂಜಿಲ್ಯಾಂಡನ್ನು ಮಣಿಸಿ ತೃತೀಯ ಸ್ಥಾನ ಪಡೆದಿತ್ತು. ಆಸ್ಟ್ರೇಲಿಯವನ್ನು 4-3ರಿಂದ ಉರುಳಿಸಿದ ಇಂಗ್ಲೆಂಡ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

2016ರ ಫೈನಲ್‌ನಲ್ಲಿ ಆಸ್ಟ್ರೇಲಿಯದ ಕೈಯಲ್ಲಿ 0-4 ಗೋಲುಗಳ ಹೊಡೆತ ಅನುಭವಿಸಿದ ಭಾರತ ರನ್ನರ್ ಅಪ್‌ ಆಗಿತ್ತು. ಆಗಲೂ ಮಿಡ್‌ ಫೀಲ್ಡರ್‌ ಸರ್ದಾರ್‌ ಸಿಂಗ್‌ ಅವರೇ ಭಾರತ ತಂಡದ ನಾಯಕರಾಗಿದ್ದರು.

ಭಾರತದ ಪಂದ್ಯಗಳು
ಆರ್ಜೆಂಟೀನಾವನ್ನು ಎದುರಿಸಿದ ಬಳಿಕ ಭಾರತ ತಂಡ ಇಂಗ್ಲೆಂಡ್‌ (ಮಾ. 4), ಆಸ್ಟ್ರೇಲಿಯ (ಮಾ. 6), ಮಲೇಶ್ಯ (ಮಾ. 7) ಮತ್ತು ಅಯರ್‌ಲ್ಯಾಂಡ್‌ (ಮಾ. 9) ವಿರುದ್ಧ ಲೀಗ್‌ ಪಂದ್ಯಗಳನ್ನು ಆಡಲಿದೆ.

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.