ಕೊಹ್ಲಿ, ಶಾಸ್ತ್ರಿ ಸಾಮರ್ಥ್ಯವನ್ನೇ ಪ್ರಶ್ನಿಸಿದ ಸುನೀಲ್ ಗಾವಸ್ಕರ್
Team Udayavani, Dec 20, 2018, 6:10 AM IST
ಮುಂಬಯಿ: 2ನೇ ಟೆಸ್ಟ್ ಸೋತ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡಕ್ಕೆ ಟೀಕೆಗಳ ಸುರಿಮಳೆ ಶುರುವಾಗಿದೆ. ಮಾಜಿ ನಾಯಕ ಸುನೀಲ್ ಗಾವಸ್ಕರ್ ಅವರು ವಿರಾಟ್ ಕೊಹ್ಲಿಯ ನಾಯಕತ್ವದ ಸಾಮರ್ಥ್ಯವನ್ನೇ ಪ್ರಶ್ನಿಸಿದ್ದಾರೆ.
“ತಂಡದ ಆಯ್ಕೆಯಲ್ಲಿ ಎಡವುತ್ತಿರುವುದರಿಂದಲೇ ಭಾರತ ವಿದೇಶದಲ್ಲಿ ಸೋಲು ಕಾಣುವಂತಾಗಿದೆ. ಒಂದು ವೇಳೆ ಆಸ್ಟ್ರೇಲಿಯ ವಿರುದ್ಧದ ಮುಂದಿನೆರಡು ಟೆಸ್ಟ್‌ನಲ್ಲಿ ಭಾರತಕ್ಕೆ ನಿರೀಕ್ಷಿತ ಫಲಿತಾಂಶ ಬರದಿದ್ದರೆ, ನಾಯಕ ಕೊಹ್ಲಿ, ತರಬೇತುದಾರ ರವಿಶಾಸ್ತ್ರಿ, ಇತರ ಸಿಬಂದಿಯಿಂದ ಪ್ರಯೋಜನವಾದರೂ ಏನು ಎಂದು ಪರಿಶೀಲನೆ ನಡೆಸಬೇಕು ಎಂದು ಗಾವಸ್ಕರ್ ಹೇಳಿದ್ದಾರೆ.
ಈ ವರ್ಷ ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಿಂದ ಅನಂತರ ಭಾರತ ತಂಡದ ಆಯ್ಕೆಯಲ್ಲಿ ಎಡವುತ್ತಿದೆ. ಇದರ ಪರಿಣಾಮ ಗೆಲ್ಲಬಹುದಾಗಿದ್ದ ಪಂದ್ಯಗಳಲ್ಲಿ ಸೋಲು ಕಾಣುವಂತಾಗಿದೆ. ತಪ್ಪು ಆಯ್ಕೆಗಳೇ ಇದಕ್ಕೆ ಕಾರಣ ಎನ್ನುವುದು ಗಾವಸ್ಕರ್ ಅಭಿಮತ. ಪರ್ತ್ ಟೆಸ್ಟ್‌ನಲ್ಲಿ ಸ್ಪಿನ್ನರ್ ಇಲ್ಲದೇ ಭಾರತ ಕಣಕ್ಕಿಳಿದು ಸೋಲನುಭವಿಸಿತ್ತು. ಇನ್ನೊಂದು ಕಡೆ ಎದುರಾಳಿ ಆಸ್ಟ್ರೇಲಿಯದ ಸ್ಪಿನ್ನರ್ ನಥನ್ ಲಿಯೋನ್, ಭಾರತ ವಿರುದ್ಧ ಭರ್ಜರಿ ಯಶಸ್ಸು ಸಾಧಿಸಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಗಾವಸ್ಕರ್ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.