VIDEO: ಬಸ್ ನಲ್ಲಿ ಅರ್ಶದೀಪ್ ವಿರುದ್ಧ ಕೂಗಾಡಿದ ಸೂರ್ಯಕುಮಾರ್ ಯಾದವ್
Team Udayavani, Dec 16, 2023, 9:11 AM IST
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡವು ಟಿ20 ಸರಣಿಯನ್ನು ಸಮಬಲಗೊಳಿಸುವಲ್ಲಿ ಸಫಲವಾಗಿದೆ. ಅಂತಿಮ ಟಿ20 ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಶತಕದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿತ್ತು.
ಪಂದ್ಯದ ಬಳಿಕ ನಾಯಕ ಸೂರ್ಯ ಕುಮಾರ್, ಬೌಲರ್ ಅರ್ಶದೀಪ್ ಸಿಂಗ್ ವಿರುದ್ಧ ಕೋಪಗೊಂಡಿದ್ದಾರೆ. ಟೀಂ ಬಸ್ ನಲ್ಲಿ ಅರ್ಶದೀಪ್ ಕುಳಿತಿದ್ದರು. ಈ ವೇಳೆ ಬಂದ ಸೂರ್ಯಕುಮಾರ್ ಕೈಸನ್ನೆ ಮಾಡಿ ಎಚ್ಚರಿಕೆ ನೀಡಿದಂತೆ ಮಾತನಾಡಿದ್ದಾರೆ.
ಸೂರ್ಯಕುಮಾರ್ ಕೋಪಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಸೂರ್ಯಕುಮಾರ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ನಡುವಿನ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Suryakumar Yadav intense reaction to Arshdeep Singh following the third T20I against South Africa 👀#SAvsIND #SuryakumarYadav #CricketTwitter pic.twitter.com/HvYLsyIcKQ
— OneCricket (@OneCricketApp) December 15, 2023
ಜೋಹಾನ್ಸ್ ಬರ್ಗ್ ನಲ್ಲಿ ನಡೆದಿದ್ದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಗೆಲುವು ಸಾಧಿಸಿದೆ. ನಾಯಕ ಸೂರ್ಯಕುಮಾರ್ ಯಾದವ್ ಎಂಟು ಸಿಕ್ಸರ್ ನೆರವಿನಿಂದ ನೂರು ರನ್ ಗಳಿಸಿದ್ದರು.
ಟಿ20 ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದ ಭಾರತ ಏಕದಿನ ಸರಣಿಗೆ ಸಿದ್ದವಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 17ರಂದು ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.