ಭಾರತಕ್ಕೆ ಸ್ಕ್ವಾಷ್ ಆಟಗಾರ್ತಿಯನ್ನು ಕಳುಹಿಸಲು ಸ್ವಿಸ್ ಪೋಷಕರ ನಕಾರ
Team Udayavani, Jul 22, 2018, 9:47 AM IST
ಹೊಸದಿಲ್ಲಿ: ಭಾರತ ಆತಿಥ್ಯದಲ್ಲಿ ನಡೆಯುತ್ತಿರುವ ವಿಶ್ವ ಕಿರಿಯರ ಸ್ಕ್ವಾಷ್ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಳ್ಳಲು ಸ್ವಿಜರ್ಲ್ಯಾಂಡ್ನ ನಂ.1 ಆಟಗಾರ್ತಿ ನಿರಾಕರಿಸಿದ್ದಾರೆ. ವಿಚಿತ್ರ ಕಾರಣವೊಡ್ಡಿ ಕೂಟದಿಂದ ಹಿಂದೆ ಸರಿದಿರುವುದು ವಿಶೇಷ.
ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲ. ಅಂಥದೊಂದು ರಾಷ್ಟ್ರಕ್ಕೆ ಬರುವುದಕ್ಕೆ ತುಂಬ ಭಯದ ಸಂಗತಿ. ಹೀಗಾಗಿ ಕಳುಹಿಸಲು ಪೋಷಕರು ಒಪ್ಪುತ್ತಿಲ್ಲ ಎಂದು ಹೇಳಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹೆಸರು ಅಂಬರ್ ಅಲಿನ್ಸ್ಕಿ. ಸ್ವಿಜರ್ಲ್ಯಾಂಡ್ನವರು. ಜು. 17ರಿಂದ ಚೆನ್ನೈನಲ್ಲಿ ಆರಂಭವಾದ ಕಿರಿಯರ ವಿಶ್ವ ಚಾಂಪಿಯನ್ಶಿಪ್ ಸ್ಕ್ವಾಷ್ನಲ್ಲಿ ಪಾಲ್ಗೊಳ್ಳಬೇಕಿತ್ತು. ಇದ್ದಕ್ಕಿದಂತೆ ಪೋಷಕರು ನನಗೆ ತೆರಳಲು ಅನುಮತಿ ನೀಡುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಮಾತನಾಡಿದ ಸ್ವಿಸ್ ಕೋಚ್ ಪಾಸ್ಕಲ್ ಭುರಿನ್, ಅಂಬರ್ ನಮ್ಮ ದೇಶದ ಅಗ್ರ ಆಟಗಾರ್ತಿ. ಆಕೆ ಭಾರತಕ್ಕೆ ಆಗಮಿಸಲು ನಿರಾಕರಿಸುತ್ತಿದ್ದಾಳೆ. ಇದಕ್ಕೆ ಕಾರಣ ಆಕೆಯ ಪೋಷಕರು ಅಂತರ್ಜಾಲದಲ್ಲಿ ಹುಡುಕಾಡಿದಾಗ ಭಾರತದಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ ಇಲ್ಲ ಎನ್ನುವ ವಿಷಯ ತಿಳಿದು ಬಂದಿದೆ. ಇದರಿಂದ ಪೋಷಕರು ಭಯಭೀತರಾಗಿದ್ದಾರೆ. ಹೀಗಾಗಿ ಮಗಳನ್ನು ಕಳುಹಿಸಲು ಒಪ್ಪುತ್ತಿಲ್ಲ ಎಂದಿದ್ದಾರೆ.
ಆತಂಕವಿಲ್ಲ: ಸಿಇಒ ಸ್ಪಷ್ಟನೆ
ಭಾರತದಲ್ಲಿ ಆಟಗಾರ್ತಿಯರಿಗೆ ರಕ್ಷಣೆ ಇಲ್ಲ ಎನ್ನುವುದನ್ನು ವಿಶ್ವ ಸ್ಕ್ವಾಷ್ ಒಕ್ಕೂಟ ತಳ್ಳಿ ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಇಒ ಆ್ಯಂಡ್ರೊ ಶೆಲ್ಲಿ, ಪ್ರತಿ ಪೋಷಕರ ಆತಂಕದ ಬಗ್ಗೆ ನಮಗೆ ಅರಿವಿದೆ. ಆದರೆ ಎಲ್ಲ ಕ್ರೀಡಾಪಟುಗಳಿಗೆ, ಅವರು ಉಳಿದುಕೊಂಡಿರುವ ಹೊಟೇಲ್ ಸುತ್ತಮುತ್ತ ಬಿಗಿ ಭದ್ರತೆ ಹಾಕಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.