ಸಯ್ಯದ್ ಮುಷ್ತಾಕ್ ಅಲಿ ಟಿ20: ಫೈನಲ್ ಹಾದಿಯಲ್ಲಿ ಕರ್ನಾಟ
Team Udayavani, Mar 11, 2019, 4:48 AM IST
ಇಂದೋರ್: ಸಯ್ಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ನಲ್ಲಿ ಕರ್ನಾಟಕ ತನ್ನ ಗೆಲುವಿನ ಓಟವನ್ನು ಮುಂದುವರಿಸಿದೆ. ಸೂಪರ್ ಲೀಗ್‌ನಲ್ಲಿ 3, ಲೀಗ್‌ನಲ್ಲಿ 7 ಸೇರಿ ಸತತ 10ನೇ ಜಯ ಸಾಧಿಸಿದೆ. ರವಿವಾರ ದಿಲ್ಲಿ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ ಕರ್ನಾಟಕ, ಬಿ ಗುಂಪಿನಿಂದ ಫೈನಲ್ ಸ್ಥಾನವನ್ನು ಬಹುತೇಕ ಖಾತ್ರಿಪಡಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ದಿಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 109 ರನ್ ಗಳಿಸಿತು. ಇದನ್ನು ಬೆನ್ನತ್ತಿ ಹೊರಟ ಕರ್ನಾಟಕ ಕೇವಲ 15.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 112 ರನ್ ಗಳಿಸಿತು.
ದಿಲ್ಲಿ ಬ್ಯಾಟಿಂಗ್ ವೈಫಲ್ಯ
ದಿಲ್ಲಿ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವಿಫಲವಾಯಿತು. ನಿತೀಶ್ ರಾಣಾ 37 ರನ್ ಗಳಿಸಿದ್ದೇ ಗರಿಷ್ಠ ವೈಯಕ್ತಿಕ ಮೊತ್ತ. ಲಲಿತ್ ಯಾದವ್ 33 ರನ್ ಮಾಡಿದರು. ಎಡಗೈ ವೇಗಿ ವಿ. ಕೌಶಿಕ್ ಸತತ 2 ಪಂದ್ಯಗಳಲ್ಲಿ ಮಿಂಚಿ 4 ವಿಕೆಟ್ ಕಿತ್ತರು. ಲೆಗ್‌ಸ್ಪಿನ್ನರ್ ಕಾರಿಯಪ್ಪ 3 ವಿಕೆಟ್ ಕಬಳಿಸಿದರು.
ಕರ್ನಾಟಕ ತುಂಬು ಆತ್ಮವಿಶ್ವಾಸದಲ್ಲಿ ಬ್ಯಾಟಿಂಗ್ ಆರಂಭಿಸಿತು. ಆರಂಭಕಾರ ರೋಹನ್ ಕದಂ, ಬಿ.ಆರ್. ಶರತ್ 37 ರನ್ ಆಗಿದ್ದಾಗ ಔಟಾದರು. ಅನಂತರ ಒಟ್ಟುಗೂಡಿದ ಮಾಯಾಂಕ್ ಅಗರ್ವಾಲ್ ಹಾಗೂ ಕರುಣ್ ನಾಯರ್ ಅಜೇಯ ಜತೆಯಾಟ ದಾಖಲಿಸಿ ತಂಡವನ್ನು ದಡ ಮುಟ್ಟಿಸಿದರು. ಅಗರ್ವಾಲ್ 43 ರನ್ ಗಳಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ನಾಯರ್ 23 ಎಸೆತಗಳಲ್ಲಿ 42 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.