T20: ಓವರ್‌ಗೆ 6 ಸಿಕ್ಸರ್ ಬಾರಿಸಿದ ನೇಪಾಲದ ಬ್ಯಾಟರ್
ಯುವರಾಜ್ ಸಿಂಗ್ ಹಾಗೂ ಕೈರನ್ ಪೊಲಾರ್ಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ..
Team Udayavani, Apr 14, 2024, 6:40 AM IST
ಓಮನ್: ನೇಪಾಲದ ಬ್ಯಾಟರ್ ದೀಪೇಂದ್ರ ಸಿಂಗ್ ಐರೀ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಪಂದ್ಯದ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿದ ಯುವರಾಜ್ ಸಿಂಗ್ ಹಾಗೂ ಕೈರನ್ ಪೊಲಾರ್ಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಟಿ20 ಪಂದ್ಯಾವಳಿಯಲ್ಲಿ ಐರೀ ಕತಾರ್ ವಿರುದ್ಧ ಈ ಸಾಧನೆ ಮಾಡಿದ್ದಾರೆ. ಕತಾರ್‌ನಕಮ್ರಾನ್ ಖಾನ್ ಎಸೆದ ಕೊನೆಯ ಓವರ್‌ನಲ್ಲಿ ಐರೀ ಎಲ್ಲ ಎಸೆತಗಳಿಗೆ ಸಿಕ್ಸರ್ ಬಾರಿಸಿದ್ದಾರೆ.
ದೀಪೇಂದ್ರ ಕ್ರಿಕೆಟ್‌ನಲ್ಲಿ ಈ ಸಾಧನಗೈದ 5ನೇ ಆಟಗಾರ. ಈ ಮೊದಲು ಹರ್ಷಲ್ ಗಿಬ್ಸ್ ಮತ್ತು ಅಮೆರಿಕದ ಜಾಸ್ಕರನ್ ಮಲ್ಹೋತ್ರಾ ಏಕದಿನ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ನೇಪಾಲ ಮೂರು ವಿಕೆಟಿಗೆ 314 ರನ್ ಪೇರಿಸಿರುವುದು ಕೂಡ ವಿಶ್ವದಾಖಲೆಯಾಗಿದೆ. ಆಬಳಿಕ ಕತಾರ್ ತೀವ್ರ ಬ್ಯಾಟಿಂಗ್ ಕುಸಿತ ಕಂಡಿದ್ದು ಕೇವಲ 41 ರನ್ನಿಗೆ ಆಲೌಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.