T20; ನ್ಯೂಜಿಲ್ಯಾಂಡ್ 92 ರನ್ನಿಗೆ ಕುಸಿತ: ಪಾಕಿಸ್ಥಾನಕ್ಕೆ 42 ರನ್ ಜಯ
5 ಪಂದ್ಯಗಳ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್
Team Udayavani, Jan 21, 2024, 11:54 PM IST
ಕ್ರೈಸ್ಟ್ಚರ್ಚ್: ಬೌಲರ್ಗಳ ಪರಾಕ್ರಮದಿಂದಾಗಿ ಪ್ರವಾಸಿ ಪಾಕಿಸ್ಥಾನ ತಂಡವು ನ್ಯೂಜಿಲ್ಯಾಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ 42 ರನ್ನುಗಳ ಗೆಲುವು ದಾಖಲಿಸಿದೆ. ಈ ಗೆಲುವಿನಿಂದ ಪಾಕಿಸ್ಥಾನ ವೈಟ್ವಾಶ್ ಭೀತಿಯಲ್ಲಿ ಪಾರಾಗಿದೆ. ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಜಯಿಸಿದ್ದ ನ್ಯೂಜಿಲ್ಯಾಂಡ್ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.
ಬೌಲರ್ಗಳಿಗೆ ಬಹಳಷ್ಟು ನೆರವು ನೀಡುತ್ತಿದ್ದ ಈ ಪಿಚ್ನಲ್ಲಿ ರನ್ ಗಳಿಸಲು ಒದ್ದಾಡಿದ ಪಾಕಿಸ್ಥಾನ ತಂಡವು 8 ವಿಕೆಟಿಗೆ 134 ರನ್ ಗಳಿಸಲಷ್ಟೇ ಶಕ್ತವಾಯಿತು. 38 ರನ್ ಗಳಿಸಿದ ಮೊಹಮ್ಮದ್ ರಿಜ್ವಾನ್ ತಂಡದ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ ಫಖಾರ್ ಜಮಾನ್ 33 ರನ್ ಹೊಡೆದರು. ನ್ಯೂಜಿಲ್ಯಾಂಡಿನ ನಾಲ್ವರು ಬೌಲರ್ಗಳು ತಲಾ ಎರಡು ವಿಕೆಟ್ ಹಾರಿಸಿದರು.
ಗೆಲ್ಲಲು ಸುಲಭ ಸವಾಲು ಪಡೆದರೂ ನ್ಯೂಜಿಲ್ಯಾಂಡ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕುಸಿತಕ್ಕೆ ಒಳಗಾಗಿ 17.2 ಓವರ್ಗಳಲ್ಲಿ ಕೇವಲ 92 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು. 53 ರನ್ನಿಗೆ ಎರಡು ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ನ್ಯೂಜಿಲ್ಯಾಂಡ್ ಆಬಳಿಕ ನಾಟಕೀಯ ಕುಸಿತಕ್ಕೆ ಒಳಗಾಗಿ 92 ರನ್ನಿಗೆ ಆಲೌಟಾಯಿತು. 39 ರನ್ ಅಂತರದಲ್ಲಿ ತಂಡ ಕೊನೆಯ ಎಂಟು ವಿಕೆಟ್ ಕಳೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.