T20;ಫಿಲ್ ಸಾಲ್ಟ್ ಸೆಂಚುರಿ : ಇಂಗ್ಲೆಂಡ್ ಜಯಭೇರಿ
Team Udayavani, Nov 10, 2024, 11:58 PM IST
ಬ್ರಿಜ್ಟೌನ್ (ಬಾರ್ಬಡಾಸ್): ಆರಂಭಕಾರ ಫಿಲ್ ಸಾಲ್ಟ್ ಅವರ ಆಕರ್ಷಕ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯಲ್ಲಿ ಇಂಗ್ಲೆಂಡ್ ಗೆಲುವಿನ ಆರಂಭ ಪಡೆದಿದೆ. ಬ್ರಿಜ್ಟೌನ್ ಮುಖಾಮುಖೀಯನ್ನು 8 ವಿಕೆಟ್ಗಳಿಂದ ಭರ್ಜರಿಯಾಗಿ ಜಯಿಸಿದೆ.
ವೆಸ್ಟ್ ಇಂಡೀಸ್ 9 ವಿಕೆಟಿಗೆ 182 ರನ್ನುಗಳ ಸವಾಲಿನ ಮೊತ್ತವನ್ನೇ ಪೇರಿಸಿತು. ಇಂಗ್ಲೆಂಡ್ ಕೇವಲ 16.5 ಓವರ್ಗಳಲ್ಲಿ ಎರಡೇ ವಿಕೆಟ್ ನಷ್ಟದಲ್ಲಿ 183 ರನ್ ಬಾರಿಸಿತು. ಫಿಲ್ ಸಾಲ್ಟ್ 103 ರನ್ ಬಾರಿಸಿ ಅಜೇಯರಾಗಿ ಉಳಿದರು. ಇದು ಅವರ 3ನೇ ಟಿ20 ಶತಕ. ಕೇವಲ 54 ಎಸೆತಗಳನ್ನು ಎದುರಿಸಿದ ಸಾಲ್ಟ್ 9 ಬೌಂಡರಿ ಹಾಗೂ 6 ಸಿಕ್ಸರ್ ಬಾರಿಸಿ ಅಬ್ಬರಿಸಿದರು. ಅಜೇಯ 59 ರನ್ ಮಾಡಿದ ಜೇಕಬ್ ಬೆಥೆಲ್ ಇಂಗ್ಲೆಂಡ್ ಸರದಿಯ ಮತ್ತೋರ್ವ ಪ್ರಮುಖ ಸ್ಕೋರರ್. ಇವರಿಬ್ಬರ 3ನೇ ವಿಕೆಟ್ ಜತೆಯಾಟದಲ್ಲಿ 107 ರನ್ ಒಟ್ಟುಗೂಡಿತು. ವಿಲ್ ಜಾಕ್ಸ್ 17 ರನ್ ಮಾಡಿದರೆ, ನಾಯಕ ಜಾಸ್ ಬಟ್ಲರ್ ಖಾತೆಯನ್ನೇ ತೆರೆಯಲಿಲ್ಲ.
ವೆಸ್ಟ್ ಇಂಡೀಸ್ ದೊಡ್ಡ ಮೊತ್ತ ಪೇರಿಸಿದರೂ ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. ನಿಕೋಲಸ್ ಪೂರಣ್ 38, ರೊಮಾರಿಯೊ ಶೆಫರ್ಡ್ ಅಜೇಯ 35 ಮತ್ತು ಗುಡಕೇಶ್ ಮೋಟಿ 33 ರನ್ ಹೊಡೆದರು. ಇಂಗ್ಲೆಂಡ್ ಪರ ಶಕಿಬ್ ಮಹಮೂದ್ 4, ಆದಿಲ್ ರಶೀದ್ 3 ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.