ಐರ್ಲೆಂಡ್ ವಿರುದ್ಧದ ಟಿ20 ಸರಣಿ; ಹಾರ್ದಿಕ್, ಗಿಲ್‌ಗೆ ವಿಶ್ರಾಂತಿ ಸಾಧ್ಯತೆ
Team Udayavani, Jul 21, 2023, 6:18 AM IST
ಹೊಸದಿಲ್ಲಿ: ಮುಂಬರುವ ದಿನಗಳಲ್ಲಿ ತವರಿನಲ್ಲಿ ಏಷ್ಯಾ ಕಪ್ ಮತ್ತು ವಿಶ್ವಕಪ್ ಕೂಟ ನಡೆಯಲಿರುವ ಕಾರಣ ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಆ. 18ರಿಂದ ಆರಂಭವಾಗುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಮೂರು ಮಾದರಿಯ ಕ್ರಿಕೆಟ್‌ಗೆ ನೇರ ಆಯ್ಕೆಯಾಗುತ್ತಿರುವ ಶುಭ್‌ಮನ್ ಗಿಲ್ ಅವರಿಗೂ ಈ ಟಿ20 ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. 29ರ ಹರೆಯದ ಪಾಂಡ್ಯ ಏಕದಿನ ತಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಗಮನಾರ್ಹ ನಿರ್ವಹಣೆ ನೀಡುತ್ತಿರುವ ಕಾರಣ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ. ಆದರೆ ಸದ್ಯ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ವೆಸ್ಟ್‌ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20ಯಲ್ಲಿ ಅವರ ನಿರ್ವಹಣೆಯ ಆಧಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ. ವೆಸ್ಟ್‌ಇಂಡೀಸ್ ವಿರುದ್ಧ ಭಾರತ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.