T20 WC: ಎರಡೂ ಪಂದ್ಯ ಸೋತ ಪಾಕಿಸ್ತಾನಕ್ಕೆ ಇನ್ನೂ ಇದೆಯಾ ಸೂಪರ್8 ಅವಕಾಶ?ಇಲ್ಲಿದೆ ಲೆಕ್ಕಾಚಾರ


Team Udayavani, Jun 10, 2024, 11:04 AM IST

T20 WC: ಎರಡೂ ಪಂದ್ಯ ಸೋತ ಪಾಕಿಸ್ತಾನಕ್ಕೆ ಇನ್ನೂ ಇದೆಯಾ ಸೂಪರ್8 ಅವಕಾಶ?ಇಲ್ಲಿದೆ ಲೆಕ್ಕಾಚಾರ

ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ 2024ಕ್ಕೆ ಫೇವರೇಟ್ ತಂಡಗಳಲ್ಲಿ ಒಂದಾಗಿ ಬಂದಿದ್ದ ಪಾಕಿಸ್ತಾನ ತಂಡವು ಮೊದಲೆರಡು ಪಂದ್ಯಗಳನ್ನು ಸೋತು ಹೊರಬೀಳುವ ಹಂತದಲ್ಲಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ದ ಸೋಲು ಕಂಡಿದ್ದ ಬಾಬರ್ ಪಡೆ, ರವಿವಾರ ಭಾರತ ವಿರುದ್ದ ಸೋಲು ಕಂಡಿದೆ.

ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 120 ರನ್ ಬೆನ್ನತ್ತಲು ಪಾಕಿಸ್ತಾನ ಪರದಾಡಿತು. ಪಂದ್ಯವನ್ನು ಆರು ರನ್ ಅಂತರದಿಂದ ಸೋತ ಪಾಕಿಸ್ತಾನ ಇನ್ನು ಸೂಪರ್ 8 ಹಂತಕ್ಕೆ ಏರುವುದು ಕಷ್ಟಕರವಾಗಿದೆ.

ಎರಡು ಪಂದ್ಯವಾಡಿರುವ ಪಾಕಿಸ್ತಾನ ಎರಡರಲ್ಲೂ ಸೋತು ಶೂನ್ಯ ಅಂಕ ಹೊಂದಿದೆ. ಮತ್ತೊಂದೆಡೆ ಭಾರತ ಮತ್ತು ಯುಎಸ್ಎ ತಂಡಗಳು ಎರಡು ಪಂದ್ಯ ಗೆದ್ದು ನಾಲ್ಕು ಅಂಕ ಸಂಪಾದಿಸಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯುವ ಕಾರಣದಿಂದ ಮುಂದಿನ ಹಂತಕ್ಕೇರಲು ಭಾರತ ಮತ್ತು ಯುಎಸ್ಎ ಮೊದಲ ಪ್ರಾಶಸ್ತ್ಯ ಹೊಂದಿದೆ.

ಪಾಕ್ ಹೇಗೆ ಮುಂದಿನ ಹಂತಕ್ಕೇರಬಹುದು?

ಮುಂದಿನ ಹಂತಕ್ಕೇರಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಐರ್ಲೆಂಡ್ ಮತ್ತು ಕೆನಡಾ ವಿರುದ್ದ ಪಾಕ್ ಆಡಲಿದೆ. ಅಷ್ಟೇ ಅಲ್ಲದೆ ಯುಎಸ್ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳನ್ನು ಗೆಲ್ಲಬಾರದು. ಈ ಹಂತದಲ್ಲಿ ಯುಎಸ್ಎ ತಂಡಕ್ಕಿಂತ ಹೆಚ್ಚು ರನ್ ರೇಟ್ ಪಡೆದರೆ ಪಾಕ್ ಸೂಪರ್ 8 ಹಂತಕ್ಕೆ ಅವಕಾಶ ಪಡೆಯಬಹುದು. ಇಲ್ಲದಿದ್ದರೆ ಗುಂಪು ಹಂತದಿಂದಲೇ ಇಸ್ಲಾಮಾಬಾದ್ ವಿಮಾನ ಏರುವುದು ಖಚಿತ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 19 ಓವರ್ ಗಳಲ್ಲಿ 119 ರನ್ ಗಳಿಸಿದರೆ, ಪಾಕಿಸ್ತಾನ ತಂಡವು 20 ಓವರ್ ಗಳಲ್ಲಿ 113 ರನ್ ಮಾತ್ರ ಗಳಿಸಿತು. ನಾಲ್ಕು ಓವರ್ ಗಳಲ್ಲಿ ಕೇವಲ 14 ರನ್ ನೀಡಿ ಮೂರು ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.