ಆಸೀಸ್ ದಾಳಿಗೆ ಬಾಂಗ್ಲಾ ಧೂಳೀಪಟ
Team Udayavani, Nov 4, 2021, 10:02 PM IST
ದುಬೈ: ಇಂಗ್ಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಬಾಂಗ್ಲಾದೇಶ ವಿರುದ್ಧ ಸೇಡು ತೀರಿಸಿಕೊಂಡಂತೆ ಆಸ್ಟ್ರೇಲಿಯ ಆಡಿದೆ. ಟಿ20 ವಿಶ್ವಕಪ್‌ನ ಗುರುವಾರದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಗುಂಪು ಒಂದರ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆದಿದೆ. ಅಲ್ಲಿಗೆ ಸೆಮಿಫೈನಲ್ ಪೈಪೋಟಿಯಲ್ಲಿ ಉಳಿದುಕೊಂಡಿದೆ.
ಆ್ಯಡಂ ಝಂಪ ದಾಳಿಗೆ ತತ್ತರಿಸಿದ ಬಾಂಗ್ಲಾ 15 ಓವರ್‌ಗಳಲ್ಲಿ ಕೇವಲ 73 ರನ್ನಿಗೆ ಕುಸಿಯಿತು. ಕಾಂಗರೂ ಪಡೆ 6.2 ಓವರ್‌ಗಳಲ್ಲಿ 2 ವಿಕೆಟಿಗೆ 78 ರನ್ ಬಾರಿಸಿತು. ಬಾಂಗ್ಲಾ ಆಡಿದ ಐದೂ ಪಂದ್ಯಗಳಲ್ಲಿ ಸೋತು ತೀವ್ರ ಮುಖಭಂಗ ಅನುಭವಿಸಿತು. ಆಸ್ಟ್ರೇಲಿಯ 82 ಎಸೆತ ಬಾಕಿ ಇರುವಂತೆಯೇ ಗೆದ್ದ ಕಾರಣ ರನ್‌ರೇಟ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಯಿತು. ಎರಡೂ ತಂಡಗಳು 4 ಪಂದ್ಯಗಳಲ್ಲಿ ಮೂರನ್ನು ಗೆದ್ದಿವೆ.
ಬಾಂಗ್ಲಾದೇಶ ಈ ವರ್ಷದ ಟಿ20 ಪಂದ್ಯಗಳಲ್ಲಿ ಅತ್ಯಧಿಕ 4ನೇ ಸಲ ನೂರರೊಳಗೆ ಆಲೌಟ್ ಆಯಿತು. ಹಾಗೆಯೇ ಸತತ 2 ಪಂದ್ಯಗಳಲ್ಲಿ ಎರಡಂಕೆಯ ಮೊತ್ತಕ್ಕೆ ಸರ್ವಪತನ ಕಂಡ 3ನೇ ತಂಡವೆನಿಸಿತು. ಇದಕ್ಕೂ ಹಿಂದಿನ ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಬಾಂಗ್ಲಾ 84ಕ್ಕೆ ಕುಸಿದಿತ್ತು. ಆ್ಯಡಂ ಝಂಪ 19 ರನ್ನಿತ್ತು 5 ವಿಕೆಟ್ ಕೆಡವಿದರು. ಇದು ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯದ ಬೌಲರ್ ಒಬ್ಬನ ಶ್ರೇಷ್ಠ ನಿರ್ವಹಣೆಯಾಗಿದೆ.
ಸಂಕ್ಷಿಪ್ತ ಸ್ಕೋರ್: ಬಾಂಗ್ಲಾದೇಶ 15 ಓವರ್, 73 (ಶಮಿಮ್ 19, ನೈಮ್ 17, ಝಂಪ 19ಕ್ಕೆ 5, ಹೇಝಲ್‌ವುಡ್ 8ಕ್ಕೆ 2). ಆಸ್ಟ್ರೇಲಿಯ 6.2 ಓವರ್, 78/2 (ಫಿಂಚ್ 40, ವಾರ್ನರ್ 18, ಶೊರಿಫುಲ್ 9ಕ್ಕೆ 1).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.