T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್
Team Udayavani, May 26, 2024, 10:19 AM IST
ಮುಂಬೈ: ಇನ್ನು ಕೇಲವೇ ದಿನಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಗಾಗಿ ಶನಿವಾರ ರೋಹಿತ್ ಶರ್ಮ ನೇತೃತ್ವದಲ್ಲಿ ಭಾರತ ತಂಡದ ಕೆಲವು ಆಟಗಾರರು ಅಮೆರಿಕಕ್ಕೆ ಪ್ರಯಾಣ ಬೆಳೆಸಿದರು.
ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿ, ರವೀಂದ್ರ ಜಡೇಜ, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಶಿವಂ ದುಬೆ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶುಭಮನ್ ಗಿಲ್, ಖಲೀಲ್ ಅಹ್ಮದ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಐಪಿಎಲ್ ಫೈನಲ್ ಮುಗಿದ ಮೇಲೆ ಉಳಿದ ಆಟಗಾರರು ತೆರಳಲಿದ್ದಾರೆ. ಸಂಜು ಸ್ಯಾಮ್ಸನ್, ಯುಜಿ ಚಾಹಲ್, ರಿಂಕು ಸಿಂಗ್ ಅವರು ಇನ್ನಷ್ಟೇ ತೆರಳಬೇಕಿದೆ. ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಲಂಡನ್ ನಲ್ಲಿ ಇರುವ ಕಾರಣ ಅಲ್ಲಿಂದಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
The wait is over.
We are back!
Let’s show your support for #TeamIndia 🇮🇳 pic.twitter.com/yc69JiclP8
— BCCI (@BCCI) May 25, 2024
ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಪೇಪರ್ ಕೆಲಸಗಳು ಮುಗಿಯದ ಕಾರಣ ಅವರು ಮೊದಲ ಗುಂಪಿನಲ್ಲಿ ಪ್ರಯಾಣಿಸಿಲ್ಲ ಎನ್ನಲಾಗಿದೆ. ಮೇ 30, ಗುರುವಾರದಂದು ಕೊಹ್ಲಿ ಅಮೆರಿಕಕ್ಕೆ ಹಾರಲಿದ್ದಾರೆ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ಹೀಗಾಗಿ ಅವರು ಪಂದ್ಯಾವಳಿ ಪ್ರಾರಂಭವಾಗುವ ಮೊದಲ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.