ಟಿ20 ವಿಶ್ವಕಪ್ ಭವಿಷ್ಯ ಶೀಘ್ರ ನಿರ್ಧಾರ: ಐಸಿಸಿ
Team Udayavani, Apr 19, 2020, 6:35 AM IST
ಮೆಲ್ಬರ್ನ್: ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್ ಕೂಟವನ್ನು ಮುಂದೂಡಬೇಕೆ ಅಥವಾ ನಡೆಸಬೇಕೆ ಎಂಬುದರ ಕುರಿತು ಮುಂದಿನ ಕೆಲವು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಹೇಳಿದೆ.
ಟಿ20 ವಿಶ್ವಕಪ್ ಆಸ್ಟ್ರೇಲಿಯದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಿಗದಿಯಾಗಿದೆ. ಆದರೆ ಕೊರೊನಾ ಸೋಂಕು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಇಡೀ ವಿಶ್ವವೇ ಶ್ರಮಿಸುತ್ತಿದೆ. ಹೀಗಾಗಿ ಈ ವರ್ಷ ನಿಗದಿಯಾಗಿದ್ದ ಹಲವು ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಮುಂದೂಡಲಾಗಿದೆ. ಟಿ20 ವಿಶ್ವಕಪ್ ಸಹ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ವಕ್ತಾರರು, ಕೊರೊನಾ ವೈರಸ್‌ನ ಪರಿಸ್ಥಿತಿಯನ್ನು ಆಧರಿಸಿ ನಮಗೆ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಟಿ20 ವಿಶ್ವಕಪ್‌ಗೆ ಇನ್ನೂ 6 ತಿಂಗಳ ಸಮಯ ಇದೆ. ಈ ಸಂಬಂಧ ಆಸ್ಟ್ರೇಲಿಯ ಸರಕಾರ ಸೇರಿದಂತೆ ತನ್ನ ಪಾಲುದಾರರೊಂದಿಗೆ ಚರ್ಚಿಸಿದ!ಅನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.