T20 World Cup ಉದ್ಘಾಟನಾ ಪಂದ್ಯದಲ್ಲಿ ಯುಎಸ್ ಕಮಾಲ್; ಕೆನಡಾ ವಿರುದ್ದ ಭರ್ಜರಿ ಜಯ
Team Udayavani, Jun 2, 2024, 9:32 AM IST
ಟೆಕ್ಸಾಸ್: ಐಸಿಸಿ ಟಿ20 ವಿಶ್ವಕಪ್ 2024 ಕೂಟಕ್ಕೆ ಅದ್ಭುತ ಆರಂಭ ಸಿಕ್ಕಿದೆ. ಕೂಟದ ಮೊದಲ ಪಂದ್ಯವಾಡಿದ ಆತಿಥೇಯ ಯುಎಸ್ಎ ಮತ್ತು ಕೆನಡಾ ತಂಡಗಳು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬ್ಯಾಟಿಂಗ್ ಮೇಲಾಟಕ್ಕೆ ಕಾರಣವಾದ ಪಂದ್ಯದಲ್ಲಿ ಯುಎಸ್ ತಂಡವು ಏಳು ವಿಕೆಟ್ ಅಂತರದ ಗೆಲುವು ಸಾಧಿಸಿದೆ.
ಡಲ್ಲಾಸ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆನಡಾ ಐದು ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿದರೆ, ಯುಎಸ್ 17.4 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 197 ರನ್ ಬಾರಿಸಿ ಜಯ ಸಾಧಿಸಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಕೆನಡಾ ಉತ್ತಮ ರನ್ ಕಲೆ ಹಾಕಿತು. ಆರಂಭಿಕ ಆಟಗಾರ ನವನೀತ್ ಧಲಿವಾಲ್ 61 ರನ್ ಗಳಿಸಿದರೆ, ನಿಕೋಲಸ್ ಕಿರ್ಟನ್ 51 ರನ್ ಮಾಡಿದರು. ಕೊನೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಶ್ರೇಯಸ್ ಮೊವ್ವ 16 ಎಸೆತಗಳಲ್ಲಿ ಅಜೇಯ 32 ರನ್ ಬಾರಿಸಿದರು. ಯುಎಸ್ ಪರ ಆಲಿ ಖಾನ್, ಹರ್ಮೀತ್ ಸಿಂಗ್ ಮತ್ತು ಕೋರಿ ಆ್ಯಂಡರ್ಸನ್ ತಲಾ ಒಂದು ವಿಕೆಟ್ ಕಿತ್ತರು.
ಗುರಿ ಬೆನ್ನತ್ತಿದ ಯುಎಸ್ಎ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ ಸ್ಟೀವನ್ ಟೇಲರ್ ಶೂನ್ಯಕ್ಕೆ ಔಟಾದರು. ನಾಯಕ ಮೊನಾಂಕ್ ಪಟೇಲ್ 16 ರನ್ ಗೆ ವಿಕೆಟ್ ಚೆಲ್ಲಿದರು. ಆದರೆ ಮೂರನೇ ವಿಕೆಟ್ ಗೆ ಜೊತೆಯಾದ ಆ್ಯಂಡ್ರಿಸ್ ಗೌಸ್ ಮತ್ತು ಆ್ಯರೋನ್ ಜೋಸ್ 130 ರನ್ ಜೊತೆಯಾಟವಾಡಿದರು.
ಆ್ಯಂಡ್ರಿಸ್ ಗೌಸ್ ಅವರು 46 ಎಸೆತಗಳಲ್ಲಿ 65 ರನ್ ಬಾರಿಸಿದರು. ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಜೋಸ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅಜೇಯರಾಗಿ ಉಳಿದ ಜೋನ್ಸ್ ಕೇವಲ 40 ಎಸೆತಗಳಲ್ಲಿ 94 ರನ್ ಚಚ್ಚಿದರು. ಈ ಇನ್ನಿಂಗ್ಸ್ ನಲ್ಲಿ ಅವರು ನಾಲ್ಕು ಬೌಂಡರಿ ಮತ್ತು ಹತ್ತು ಭರ್ಜರಿ ಸಿಕ್ಸರ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.