T20 World Cup: ಪಾಕ್ ವಿರುದ್ದದ ಪಂದ್ಯಕ್ಕೆ ಮುನ್ನ ಮತ್ತೆ ಗಾಯಗೊಂಡ ರೋಹಿತ್ ಶರ್ಮಾ
Team Udayavani, Jun 8, 2024, 1:09 PM IST
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿದೆ. ರವಿವಾರ ರಾತ್ರಿ (ಭಾರತೀಯ ಕಾಲಮಾನ) ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ.
ಈ ಪಂದ್ಯಕ್ಕಾಗಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ನಾಯಕ ರೋಹಿತ್ ಶರ್ಮಾ ಅವರ ಕೈಗೆ ಏಟಾಗಿದೆ ಎಂದು ವರದಿಯಾಗಿದೆ. ಥ್ರೋ ಡೌನ್ ಸ್ಪೆಷಲಿಸ್ಟ್ ಅವರ ಎಸೆತಗಳನ್ನು ಎದುರಿಸುವ ವೇಳೆ ಚೆಂಡು ರೋಹಿತ್ ಬೆರಳಿಗೆ ತಾಗಿದೆ. ಭಾರತೀಯ ಫಿಸಿಯೋಗಳು ಕೂಡಲೇ ರೋಹಿತ್ ಅವರನ್ನು ಪರೀಕ್ಷಿಸಿದರು. ಬ್ಯಾಟಿಂಗ್ ಅಭ್ಯಾಸವನ್ನು ಒಂದೆರಡು ನಿಮಿಷಗಳ ಕಾಲ ಸ್ಥಗಿತಗೊಳಿಸಲಾಯಿತು. ಬಳಿಕ ರೋಹಿತ್ ಬ್ಯಾಟಿಂಗ್ ಮುಂದುವರಿಸಿದರು. ಇದು ಸದ್ಯ ತಂಡಕ್ಕೆ ನಿರಾಳತೆ ಒದಗಿಸಿದೆ.
ಐರ್ಲೆಂಡ್ ವಿರುದ್ದದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರೋಹಿತ್ ಅವರ ರಟ್ಟೆಗೆ ಚೆಂಡು ಬಡಿದಿತ್ತು. ಬಳಿಕ ಅವರು ಕ್ರೀಸ್ ತೊರೆದಿದ್ದರು. ಪಂದ್ಯದ ಬಳಿಕ ಮಾತನಾಡಿದ್ದಅವರು ರಟ್ಟೆ ಸ್ವಲ್ಪ ನೋವುತ್ತಿದೆ ಎಂದಿದ್ದರು.
ಶುಕ್ರವಾರ ನ್ಯೂಯಾರ್ಕ್ ನಲ್ಲಿ ಭಾರತ ತಂಡವು ಮೂರು ಗಂಟೆಗಳ ಕಾಲ ಅಭ್ಯಾಸ ನಡೆಸಿದೆ. ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ತಂಡದೊಂದಿಗೆ ಮಸ್ತಿ ಮಾಡುತ್ತಿರುವುದು ಕಂಡು ಬಂತು.
Plenty of smiles at India training in New York on Friday ahead of their #T20WorldCup match against Pakistan, with a player from a rival camp making a surprise visit 👀 pic.twitter.com/gNBl3VnYCf
— T20 World Cup (@T20WorldCup) June 8, 2024
ಭಾರತ ತಂಡವು ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ದ ಎಂಟು ವಿಕೆಟ್ ಅಂತರದ ಸುಲಭ ಗೆಲುವು ಸಾಧಿಸಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡವು ಯುಎಸ್ಎ ವಿರುದ್ದದ ಸೂಪರ್ ಓವರ್ ಥ್ರಿಲ್ಲರ್ ನಲ್ಲಿ ಸೋಲು ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.