![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 14, 2022, 7:47 PM IST
ಮುಂಬಯಿ: ಕ್ರಿಕೆಟಿಗ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.
2006 ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.
2007 ರ ಟಿ-20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್ ಶೂಟೌಟ್ ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್ ರೇಟ್ ನೊಂದಿಗೆ 249 ರನ್ ಗಳಿಸಿದ್ದಾರೆ.
2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್ ನಲ್ಲಿ ಮಂಬಯಿ, ಆರ್ ಸಿಬಿ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಸಿಎಸ್ ಕೆ ಪರವಾಗಿ ಆಡಿದ್ದರು. ಐಪಿಎಲ್ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್ ಗಳನ್ನು ಮಾಡಿದ್ದಾರೆ.
ಟ್ವೀಟ್ ನಲ್ಲಿ ನಿವೃತ್ತಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಕ್ರಿಕೆಟ್ ಆಡಲು ಶುರು ಮಾಡಿ 20 ವರ್ಷವಾಯಿತು. ನನ್ನ ದೇಶ, ರಾಜ್ಯಕ್ಕಾಗಿ ಆಡಿರುವುದು ನನ್ನ ಪಾಲಿಗೆ ದೊಡ್ಡ ಹೆಮ್ಮೆಯ ಸಂಗತಿ. ಈ ಜರ್ನಿಯಲ್ಲಿ ಹಲವಾರು ಬಾರಿ ಏರು – ತಗ್ಗನ್ನು ಕಂಡಿದ್ದೇನೆ. ವ್ಯಕ್ತಿಯಾಗಿ ಕ್ರಿಕೆಟ್ ಬೆಳೆಯಲು ಅವಕಾಶ ನೀಡಿದೆ. ಎಲ್ಲಾ ಒಳ್ಳೆಯ ವಿಷಯಕ್ಕೆ ಅಂತ್ಯವೆನ್ನುವುದು ಬರುತ್ತದೆ. ನಾನು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತೇನೆ. ಜೀವನದ ಮುಂದಿನ ಹಂತವನ್ನು ಆರಂಭಿಸಲಿದ್ದೇನೆ ಎಂದಿದ್ದಾರೆ.
ಇಷ್ಟು ವರ್ಷ ಕ್ರಿಕೆಟ್ ವೃತ್ತಿ ಬೆಳೆಯಲು ಅವಕಾಶ ಕೊಟ್ಟ ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ, ಸೌರಾಷ್ಟ್ರ ಕ್ರಿಕೆಟ್ ಮಂಡಳಿ ,ಕೇರಳಕ್ರಿಕೆಟ್ ಮಂಡಳಿಗೆ ಧನ್ಯವಾದಗಳು. ಇದರೊಂದಿಗ ಐಪಿಎಲ್ ನಲ್ಲಿ ಆಡಿದ ತಂಡಗಳಿಗೂ, ಕುಟುಂಬ ವರ್ಗಕ್ಕೂ ಧನ್ಯವಾದವನ್ನು ಹೇಳಿದ್ದಾರೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.