ಮುಂಬಯಿ ಮೊತ್ತ ಮೀರಿಸಿದ ತಮಿಳುನಾಡು


Team Udayavani, Oct 27, 2017, 7:55 AM IST

27-3.jpg

ಮುಂಬಯಿ: ಮಧ್ಯಮ ವೇಗಿ ವಿಜಯ್‌ಕುಮಾರ್‌ ಯೋ ಮಹೇಶ್‌ ತಮ್ಮ ಕ್ರಿಕೆಟ್‌ ಬದುಕಿನಲ್ಲೇ ಬಾರಿಸಿದ ಮೊದಲ ಸೆಂಚುರಿ ಸಾಹಸದಿಂದಾಗಿ ಆತಿಥೇಯ ಮುಂಬಯಿ ವಿರುದ್ಧದ ರಣಜಿ ಪಂದ್ಯದಲ್ಲಿ ತಮಿಳುನಾಡು ಮಹತ್ವದ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮುಂಬಯಿಯ 374ಕ್ಕೆ ಉತ್ತರವಾಗಿ 5ಕ್ಕೆ 239 ರನ್‌ ಮಾಡಿದ್ದ ತಮಿಳುನಾಡು, 3ನೇ ದಿನದಾಟದಲ್ಲಿ 450 ರನ್‌ ತನಕ ಬೆಳೆಯಿತು. 76 ರನ್‌ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಮುಂಬಯಿ ಒಂದು ವಿಕೆಟಿಗೆ 85 ರನ್‌ ಮಾಡಿದೆ. ಮಂಗಳವಾರ ಅಂತಿಮ ದಿನವಾದ ಕಾರಣ ಪಂದ್ಯ ಡ್ರಾಗೊಳ್ಳುವುದು ಬಹುತೇಕ ಖಚಿತ.

105 ರನ್‌ ಮಾಡಿದ್ದ ಬಾಬಾ ಇಂದ್ರಜಿತ್‌ ತಮಿಳುನಾಡಿಗೆ ಆಧಾರವಾಗಿ ನಿಂತಿದ್ದರು. ಆದರೆ ಸ್ಕೋರ್‌ 339 ರನ್‌ ಆಗಿದ್ದಾಗ 8ನೇ ವಿಕೆಟ್‌ ರೂಪದಲ್ಲಿ ಇಂದ್ರಜಿತ್‌ ಪೆವಿಲಿಯನ್‌ ಸೇರಿಕೊಳ್ಳುವುದರೊಂದಿಗೆ ಮುಂಬಯಿಯ ಇನ್ನಿಂಗ್ಸ್‌ ಲೀಡ್‌ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿತೆಂದೇ ಭಾವಿಸಲಾಗಿತ್ತು. ಆದರೆ 9ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದು ಕ್ರೀಸಿಗೆ ಅಂಟಿಕೊಂಡು ನಿಂತ ಯೋ ಮಹೇಶ್‌ ಅಸಾಮಾನ್ಯ ಬ್ಯಾಟಿಂಗ್‌ ಪ್ರದರ್ಶನವೊಂದಕ್ಕೆ ಸಾಕ್ಷಿಯಾದರು. ಅಜೇಯ 103 ರನ್‌ ಬಾರಿಸಿ ಮುಂಬಯಿ ಬೌಲರ್‌ಗಳಿಗೆ ಬೆವರಿಳಿಸಿದರು (216 ಎಸೆತ, 9 ಬೌಂಡರಿ, 4 ಸಿಕ್ಸರ್‌). ಬಾಬಾ ಇಂದ್ರಜಿತ್‌ 152ರ ತನಕ ಬೆಳೆದರು (247 ಎಸೆತ, 14 ಬೌಂಡರಿ).

ಸಂಕ್ಷಿಪ್ತ ಸ್ಕೋರ್‌: ಮುಂಬಯಿ-374 ಮತ್ತು 1 ವಿಕೆಟಿಗೆ 85 (ಹೆರ್ವಾಡ್ಕರ್‌ ಬ್ಯಾಟಿಂಗ್‌ 24, ಅಯ್ಯರ್‌ ಬ್ಯಾಟಿಂಗ್‌ 56). ತಮಿಳುನಾಡು-450 (ಇಂದ್ರಜಿತ್‌ 152, ಯೋ ಮಹೇಶ್‌ ಔಟಾಗದೆ 103, ವಾಷಿಂಗ್ಟನ್‌ 69, ಗೋಹಿಲ್‌ 129ಕ್ಕೆ 4, ಕುಲಕರ್ಣಿ 50ಕ್ಕೆ 2, ಪಾರ್ಕರ್‌ 74ಕ್ಕೆ 2).

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.