ಆಗಸ್ಟ್ ನಲ್ಲಿ ಟೀಮ್ ಇಂಡಿಯಾದಿಂದ ದ. ಆಫ್ರಿಕಾ ಪ್ರವಾಸ?
Team Udayavani, May 22, 2020, 5:45 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಮೂರು ಪಂದ್ಯಗಳ ಟಿ20 ಸರಣಿಗಾಗಿ ಭಾರತ ಕ್ರಿಕೆಟ್ ತಂಡ ಮುಂದಿನ ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸಗೈಯುವ ಸಾಧ್ಯತೆಯೊಂದು ಗೋಚರಿಸಿದೆ. ಆದರೆ ಇದು ಎರಡೂ ಸರಕಾರಗಳ ಒಪ್ಪಿಗೆಯನ್ನು ಅವಲಂಬಿಸಿದೆ ಎಂದು ಕ್ರಿಕೆಟ್ ವೆಬ್‌ಸೈಟ್ ಒಂದು ವರದಿ ಮಾಡಿದೆ.
ಈ ಸರಣಿ ಬಗ್ಗೆ ಕಳೆದ ಫೆಬ್ರವರಿಯಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕ್ರಿಕೆಟ್ ಸೌತ್ ಆಫ್ರಿಕಾದ (ಸಿಎಸ್‌ಎ) ನಿರ್ದೇಶಕ ಗ್ರೇಮ್ ಸ್ಮಿತ್ ಮಾತುಕತೆ ನಡೆಸಿದ್ದರು. ಕೋವಿಡ್ 19ದಿಂದಾಗಿ ಈ ಮಾತುಕತೆ ಅರ್ಧದಲ್ಲೇ ನಿಂತಿತ್ತು. ಬುಧವಾರ ಇದು ಅಂತಿಮಗೊಂಡಿದೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಾಕಸ್ ಫೌಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆದರೆ ಆಗಸ್ಟ್‌ನಲ್ಲಷ್ಟೇ ಇದನ್ನು ಅಧಿಕೃತಗೊಳಿ ಸಲಾಗುವುದು, ಇದಕ್ಕೆ ಎರಡೂ ಕಡೆಯ ಸರಕಾರಗಳ ಒಪ್ಪಿಗೆ ಅತ್ಯಗತ್ಯ ಎಂಬುದಾಗಿ ಫೌಲ್ ಸ್ಪಷ್ಟಪಡಿಸಿದ್ದಾರೆ.
2018ರಲ್ಲಿ ಭಾರತ ಮೇಲುಗೈ
2018ರ ಆರಂಭದಲ್ಲಿ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಆಗ 3 ಟೆಸ್ಟ್, 6 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಿತ್ತು. ಟೆಸ್ಟ್ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡ ಬಳಿಕ ತಿರುಗಿ ಬಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 5-1ರಿಂದ ಹಾಗೂ ಟಿ20 ಸರಣಿಯನ್ನು 2-1ರಿಂದ ವಶಪಡಿಸಿಕೊಂಡಿತ್ತು.
ಅನಂತರ ಕಳೆದ ಅಕ್ಟೋಬರ್‌ನಲ್ಲಿ ಭಾರತಕ್ಕೆ ಪ್ರವಾಸ ಬಂದ ದಕ್ಷಿಣ ಆಫ್ರಿಕಾ, 3 ಪಂದ್ಯಗಳ ಟಿ20 ಸರಣಿಯಲ್ಲಿ 1-2 ಅಂತರದ ಸೋಲನುಭವಿಸಿತು. ಫೆಬ್ರವರಿಯಲ್ಲಿ 3 ಪಂದ್ಯಗಳ ಏಕದಿನ ಸರಣಿ ನಡೆಯಬೇಕಿತ್ತು. ಮೊದಲ ಪಂದ್ಯ ಮಳೆಯಿಂದ ವಾಶೌಟ್ ಆಯಿತು. ಅಷ್ಟರಲ್ಲಿ ಕೋವಿಡ್ 19 ತೀವ್ರಗೊಳ್ಳಲಾರಂಭಿಸಿದ್ದರಿಂದ ಸರಣಿಯನ್ನೇ ರದ್ದು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rohit Sharma; ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ವಿದಾಯ?
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.