Team India; ತಂಡಕ್ಕೆ ಆಯ್ಕೆಯಾಗುವ ಮೊದಲು ಗಂಭೀರ್ ಬಗ್ಗೆ ಸ್ಪಷ್ಟ ಸಂದೇಶ ನೀಡಿದ ವಿರಾಟ್
Team Udayavani, Jul 19, 2024, 5:17 PM IST
ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಅವರು ಭಾರತೀಯ ತಂಡದ ಕೋಚ್ ಆಗಿ ಕಾರ್ಯ ಆರಂಭಿಸಿದ್ದಾರೆ. ಈ ತಿಂಗಳಾಂತ್ಯಕ್ಕೆ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸದಿಂದ ಗಂಭೀರ್ ಕೋಚ್ ಅಧಿಕಾರವಧಿ ಆರಂಭವಾಗಲಿದೆ.
ಲಂಕಾ ಪ್ರವಾಸದ ಟಿ20 ಮತ್ತು ಏಕದಿನ ಸರಣಿಗೆ ಬಿಸಿಸಿಐ (BCCI) ಗುರುವಾರ ತಂಡವನ್ನು ಪ್ರಕಟಿಸಿದೆ. ತಂಡದ ಆಯ್ಕೆಯಲ್ಲಿ ಗಂಭೀರ್ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ. ಲಂಕಾ ಸರಣಿಯಿಂದ ವಿಶ್ರಾಂತಿ ಬಯಸಿದ್ದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡಾ ಕೊನೆಯ ಕ್ಷಣದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ದೆಹಲಿ ಆಟಗಾರರಾದ ವಿರಾಟ್ ಮತ್ತು ಗೌತಮ್ ಗಂಭೀರ್ ನಡುವೆ ಮೈದಾನದಲ್ಲಿ ಹಲವು ಬಾರಿ ಗಲಾಟೆಗಳು ನಡೆದಿದೆ. 2023ರ ಐಪಿಎಲ್ ನಲ್ಲಿ ಗಂಭೀರ್ ಮತ್ತು ವಿರಾಟ್ ಜಗಳವಾಡಿಕೊಂಡಿದ್ದರು. ತಮ್ಮ ಅಗ್ರೆಶನ್ ನಿಂದಲೇ ಹೆಸರಾದ ಇಬ್ಬರು ಆಟಗಾರರು ಒಂದೇ ತಂಡದಲ್ಲಿ ಆಡುತ್ತಿದ್ದಾರೆ.
ಶ್ರೀಲಂಕಾ ವಿರುದ್ಧದ ಭಾರತದ ಏಕದಿನ ತಂಡದ ಭಾಗವಾಗಲು ವಿರಾಟ್ ಕೊಹ್ಲಿ ಸಹ ಒಪ್ಪಿಗೆ ನೀಡುವುದರೊಂದಿಗೆ, ಅವರು ಗಂಭೀರ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ.
ಈ ಪರಿಸ್ಥಿತಿಯ ನಡುವೆ, ಈ ಹಿಂದಿನ ಗಂಭೀರ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ಭಾರತ ತಂಡದೊಳಗಿನ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೊಹ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಭರವಸೆ ನೀಡಿದ್ದಾರೆ ಎಂದು ಕ್ರಿಕ್‌ಬಜ್ ವರದಿ ದೃಢಪಡಿಸಿದೆ. ಇಬ್ಬರೂ ಸಾಮಾನ್ಯ ಗುರಿಯತ್ತ ಕೆಲಸ ಮಾಡುವುದರಿಂದ ಮಂಡಳಿಯು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.
2023ರ ರ ಐಪಿಎಲ್ ನಲ್ಲಿ ಗಂಭೀರ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದರು. ಈ ವೇಳೆ ಪಂದ್ಯವೊಂದರಲ್ಲಿ ವಿರಾಟ್ ಕೊಹ್ಲಿ ಜತೆ ಗಂಭೀರ್ ಮೈದಾನದಲ್ಲಿ ಗಲಾಟೆ ಮಾಡಿಕೊಂಡಿದ್ದರು. 2024ರ ಐಪಿಎಲ್ ನಲ್ಲಿ ಇಬ್ಬರೂ ತಬ್ಬಿಕೊಂಡು ಒಂದಾಗಿದ್ದರು.
ಕೆಲವು ತಿಂಗಳ ಹಿಂದೆ ಗೌತಿ ಕೂಡಾ ವಿರಾಟ್ ಬಗ್ಗೆ ಮಾತನಾಡಿದ್ದರು. “ನೈಜತೆಗಿಂತ ಗ್ರಹಿಕೆಗಳು ತುಂಬಾ ದೂರದಲ್ಲಿದೆ. ವಿರಾಟ್ ಕೊಹ್ಲಿ ಜತೆಗಿನ ನನ್ನ ಸಂಬಂಧವನ್ನು ತಿಳಿಯಲು ಈ ದೇಶ ಬಯಸುವುದಿಲ್ಲ. ತನ್ನನ್ನು ತಾನು ವ್ಯಕ್ತಪಡಿಸಲು ಮತ್ತು ನಮ್ಮ ಆಯಾ ತಂಡಗಳನ್ನು ಗೆಲ್ಲಲು ಸಹಾಯ ಮಾಡಲು ನನ್ನಂತೆಯೇ ಅವನಿಗೆ ಹಕ್ಕಿದೆ. ಸಾರ್ವಜನಿಕರಿಗೆ ಮಸಾಲಾ ಕೊಡಲು ನಮ್ಮ ಸಂಬಂಧವಿಲ್ಲ ಎಂದು ಗಂಭೀರ್ ಹೇಳಿದ್ದರು.
ನವೀನ್-ಉಲ್-ಹಕ್ ಮತ್ತು ಗೌತಮ್ ಗಂಭೀರ್ ಅವರನ್ನು ಅಪ್ಪಿಕೊಂಡ ನಂತರ ಜನರು ತಮ್ಮಲ್ಲಿ ನಿರಾಶೆಗೊಂಡಿದ್ದಾರೆ ಎಂದು ವಿರಾಟ್ ಕೂಡ ಒಪ್ಪಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.