Team India; ಟಿ20 ವಿಶ್ವಕಪ್ ಬಳಿಕ ಶ್ರೀಲಂಕಾಗೆ ತೆರಳಲಿದೆ ಟೀಂ ಇಂಡಿಯಾ
Team Udayavani, Nov 30, 2023, 11:58 AM IST
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತಿನಲ್ಲಿ ಇರಿಸಿರಬಹುದು, ಆದರೆ ಭಾರತ ತಂಡ ಮುಂದಿನ ವರ್ಷ ಶ್ರೀಲಂಕಾ ಪ್ರವಾಸಕ್ಕೆ ಅಣಿಯಾಗಿದೆ. ಈ ಸಂದರ್ಭದಲ್ಲಿ 6 ಪಂದ್ಯಗಳ ಸೀಮಿತ ಓವರ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದ 2024ರ ಕ್ರಿಕೆಟ್ ಕ್ಯಾಲೆಂಡರ್ ಪ್ರಕಾರ ಭಾರತ ತಂಡ ಜುಲೈ-ಆಗಸ್ಟ್ ತಿಂಗಳಲ್ಲಿ ದ್ವೀಪರಾಷ್ಟ್ರಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ 3 ಏಕದಿನ ಪಂದ್ಯ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.
ಶ್ರೀಲಂಕಾ ಮಂಡಳಿಯು ಇಡೀ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಅದರಂತೆ ಜನವರಿಯಲ್ಲಿ ಜಿಂಬಾಬ್ವೆ ತಂಡ ಮೂರು ಏಕದಿನ, ಮೂರು ಟಿ20, ಜನವರಿ-ಫೆಬ್ರವರಿಯಲ್ಲಿ ಆಫ್ಘಾನಿಸ್ತಾನವು ಒಂದು ಟೆಸ್ಟ್, 3 ಏಕದಿನ, 3 ಟಿ20, ಫೆಬ್ರವರಿ-ಮಾರ್ಚ್‌ನಲ್ಲಿ ಬಾಂಗ್ಲಾದೇಶವು 2 ಟೆಸ್ಟ್, 3 ಏಕದಿನ, 3 ಟಿ20, ಜೂನ್-ಜುಲೈ ನಲ್ಲಿ ಐಸಿಸಿ ಟಿ20 ವಿಶ್ವಕಪ್, ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್ ಮೂರು ಟೆಸ್ಟ್, ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ 2 ಟೆಸ್ಟ್, ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ 3 ಏಕದಿನ ಮತ್ತು 3 ಟಿ20, ನವೆಂಬರ್‌ನಲ್ಲಿ ನ್ಯೂಜಿಲೆಂಡ್ 3 ಏಕದಿನ, 3 ಟಿ20, ನವೆಂಬರ್-ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ 2 ಟೆಸ್ಟ್, ಡಿಸೆಂಬರ್- 2025ರ ಜನವರಿಯಲ್ಲಿ ನ್ಯೂಜಿಲೆಂಡ್ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.