“ಎ’ ತಂಡಗಳ ಟೆಸ್ಟ್ ಡ್ರಾ
Team Udayavani, Sep 21, 2019, 5:09 AM IST
ಮೈಸೂರು: ಭಾರತ-ದಕ್ಷಿಣ ಆಫ್ರಿಕಾ “ಎ’ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಡ್ರಾದಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಭಾರತ 1-0 ಅಂತರದಿಂದ ಸರಣಿಯನ್ನು ತನ್ನದಾಗಿಸಿ ಕೊಂಡಿದೆ. ತಿರುವನಂತ ಪುರದಲ್ಲಿ ನಡೆದ ಮೊದಲ ಪಂದ್ಯವನ್ನು ಆತಿಥೇಯ ತಂಡ 7 ವಿಕೆಟ್‌ಗಳಿಂದ ಗೆದ್ದಿತ್ತು.
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆರಂಭಕಾರ ಪ್ರಿಯಾಂಕ್ ಪಾಂಚಾಲ್ ಅಮೋಘ ಶತಕ ಬಾರಿಸಿ ಮಿಂಚಿದರು. ಪಾಂಚಾಲ್ ಗಳಿಕೆ 109 ರನ್ (192 ಎಸೆತ, 9 ಬೌಂಡರಿ, 4 ಸಿಕ್ಸರ್). ಕರುಣ್ ನಾಯರ್ ಅಜೇಯ 51 ರನ್ ಮಾಡಿದರು. 3 ವಿಕೆಟಿಗೆ 202 ರನ್ ಮಾಡಿದ ಬಳಿಕ ಭಾರತ ದ್ವಿತೀಯ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಸ್ಪಷ್ಟ ಫಲಿತಾಂಶಕ್ಕೆ ಕಾಲಾವಕಾಶ ಇಲ್ಲವಾದ್ದರಿಂದ ಈ ಹಂತದಲ್ಲೇ ಪಂದ್ಯವನ್ನು ಕೊನೆಗೊಳಿಸಲಾಯಿತು.
ಭಾರತದ 417 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ದಕ್ಷಿಣ ಆಫ್ರಿಕಾ 400 ರನ್ ಮಾಡಿತ್ತು.
ಸಂಕ್ಷಿಪ್ತ ಸ್ಕೋರ್: ಭಾರತ “ಎ’-417 ಮತ್ತು 3 ವಿಕೆಟಿಗೆ 202 ಡಿಕ್ಲೇರ್ (ಪಾಂಚಾಲ್ 109, ನಾಯರ್ ಔಟಾಗದೆ 51, ಪೀಟ್ 88ಕ್ಕೆ 2). ದಕ್ಷಿಣ ಆಫ್ರಿಕಾ “ಎ’-400.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.