ಟೆಸ್ಟ್ ಸರಣಿ: ಕಠಿಣ ಅಭ್ಯಾಸದಲ್ಲಿ ಪಾಲ್ಗೊಂಡ ಟೀಂ ಇಂಡಿಯಾ; ತಂಡ ಸೇರಿದ ಪಂತ್
Team Udayavani, Dec 12, 2022, 5:11 PM IST
ಚತ್ತೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲು ಚತ್ತೋಗ್ರಾಮ್ ನಲ್ಲಿ ಭಾರತವು ತನ್ನ ಮೊದಲ ಅಭ್ಯಾಸ ನಡೆಸಿದೆ. ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತರಬೇತಿ ಅವಧಿಯ ಮೇಲ್ವಿಚಾರಣೆ ಮಾಡಿದರು.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಏಕದಿನ ಸರಣಿಯ ವೇಳೆ ರೋಹಿತ್ ಶರ್ಮಾ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಶರ್ಮಾ ಲಭ್ಯರಿರುವುದಿಲ್ಲ.
ಕೆಎಲ್ ರಾಹುಲ್ ಸೋಮವಾರ ಬೆಳಿಗ್ಗೆ ಶುಭ್ಮನ್ ಗಿಲ್ ಅವರೊಂದಿಗೆ ನೆಟ್ ಬೌಲರ್ ಗಳನ್ನು ಎದುರಿಸಿದರು. ರೋಹಿತ್ ಇಲ್ಲದ ಕಾರಣ ಕೆಎಲ್ ರಾಹುಲ್ ಮತ್ತು ಶುಬ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ರೋಹಿತ್ ಬದಲಿಗೆ ಇಂಡಿಯಾ ಎ ನಾಯಕ ಅಭಿಮನ್ಯು ಈಶ್ವರನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಅಸ್ಸಾಂ : ಶಸ್ತ್ರಾಸ್ತ್ರಗಳ ಸಮೇತ ಶರಣಾಗತರಾದ ಸಾವಿರಕ್ಕೂ ಹೆಚ್ಚು ಬ್ರೂ ಉಗ್ರಗಾಮಿಗಳು
ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರು ಇಂದು ಉತ್ತಮ ನೆಟ್ ಸೆಶನ್ ಹೊಂದಿದ್ದರು. ಬಾಂಗ್ಲಾಕ್ಕೆ ಏಕದಿನ ತಂಡದೊಂದಿಗೆ ಬಂದಿದ್ದ ಪಂತ್ ಫಿಟ್ನೆಸ್ ಸಮಸ್ಯೆ ಕಾರಣದಿಂದ ತಂಡದಿಂದ ಬೇರ್ಪಟ್ಟಿದ್ದರು. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬಂದು, ಚಿಕಿತ್ಸೆ ಪಡೆದು ಇದೀಗ ಮತ್ತೆ ಟೆಸ್ಟ್ ತಂಡ ಕೂಡಿಕೊಂಡಿದ್ದಾರೆ.
Covering all bases, #TeamIndia trained in Chattogram ahead of our 1st Test against Bangladesh.
Snapshots from our training session ??#BANvIND pic.twitter.com/xh6l9rdhYu
— BCCI (@BCCI) December 12, 2022
ಎರಡನೇ ಆಯ್ಕೆಯ ವಿಕೆಟ್ ಕೀಪರ್ ಕೆಎಸ್ ಭರತ್ ಕೂಡಾ ಅಭ್ಯಾಸದಲ್ಲಿ ತೊಡಗಿದ್ದರು. ಉಪನಾಯಕ ಚೇತೇಶ್ವರ ಪೂಜಾರ ಕೂಡ ತರಬೇತಿ ಅವಧಿಯಲ್ಲಿ ಕಂಡುಬಂದರು. ಎರಡನೇ ಅನಧಿಕೃತ ಟೆಸ್ಟ್‌ಗಾಗಿ ಭಾರತ ಎ ತಂಡದೊಂದಿಗೆ ಬಾಂಗ್ಲಾದೇಶದಲ್ಲಿದ್ದ ಹಿರಿಯ ಬ್ಯಾಟರ್ ಪೂಜಾರ ತರಬೇತಿ ಅವಧಿಯಲ್ಲಿ ಮುಖ್ಯ ಕೋಚ್ ದ್ರಾವಿಡ್ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.