ಪೃಥ್ವಿ ಹೊರಕ್ಕೆ ಮಾಯಾಂಕ್, ಪಾಂಡ್ಯ ಒಳಕ್ಕೆ
Team Udayavani, Dec 18, 2018, 6:15 AM IST
ಪರ್ಥ್: ಪೂರ್ಣ ಆಸ್ಟ್ರೇಲಿಯ ಸರಣಿಯಿಂದಲೇ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಹೊರಕ್ಕೆ ಬಿದ್ದಿದ್ದಾರೆ.ಅಭ್ಯಾಸ ಪಂದ್ಯದ ವೇಳೆ ಗಾಯಗೊಂಡಿದ್ದ ಪೃಥ್ವಿ ಶಾ ಕೊನೆಗೂ ಚೇತರಿಕೆ ಕಾಣದ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಕರ್ನಾಟಕ ಆರಂಭಿಕ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಲಾಗಿದೆ.
ಪ್ರಸಕ್ತ ಗುಜರಾತ್ ವಿರುದ್ಧ ರಣಜಿ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಮಾಯಾಂಕ್‌ಗೆ ಸೋಮವಾರ ರಾಷ್ಟ್ರೀಯ ತಂಡದಿಂದ ದಿಢೀರ್ ಕರೆ ಬಂದಿದೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ತವರಿನಲ್ಲಿ ನಡೆದ ಸರಣಿಗೆ ಮಾಯಾಂಕ್ ಆಯ್ಕೆಯಾಗಿದ್ದರು. ಆದರೆ ಅಂತಿಮ ಹನ್ನೊಂದರಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇವರಿಗೆ ಸ್ಥಾನ ದೊರಕುವ ನಿರೀಕ್ಷೆ ಹೆಚ್ಚಿದೆ.
ಪೃಥ್ವಿ ಹೊರಬಿದ್ದಿರುವುದು,ಕೆ.ಎಲ್.ರಾಹುಲ್ – ಮುರಳಿ ವಿಜಯ್ ಜೋಡಿ ಆರಂಭಿಕರಾಗಿ ವಿಫಲರಾಗಿರುವುದು ಗಮನಿಸಿದಾಗ ಮಾಯಾಂಕ್‌ಗೆ ಇನಿಂಗ್ಸ್ ಭಾರತದ ಆರಂಭಿಸುವ ಅವಕಾಶ ಸಿಗಲಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಮೊದಲ ಟೆಸ್ಟ್ ಆಡುವ ಮೂಲಕ ಪಾದಾರ್ಪಣೆ ಮಾಡುವ ಹುಮ್ಮಸ್ಸಿನಲ್ಲಿರುವ ಮಾಯಾಂಕ್‌ಗೆ ಅವಕಾಶ ಸಿಗಲಿದೆಯೇ ಎನ್ನುವುದು ಸದ್ಯದ ಕುತೂಹಲ. ಆಸ್ಟ್ರೇಲಿಯ ಪಿಚ್ ವೇಗದ ಬೌಲಿಂಗ್‌ಗೆ ಹೆಚ್ಚಿನ ನೆರವು ನೀಡುತ್ತಿರುವುದರಿಂದ ವೇಗಿ ಹಾರ್ದಿಕ್ ಪಾಂಡ್ಯಗೂ ತಂಡವನ್ನು ಕೂಡಿಕೊಳ್ಳುವಂತೆ ಕರೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.