ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್: ಭಾರತದ ನಂ. 1 ಸ್ಥಾನ ಇನ್ನಷ್ಟು ಭದ್ರ
Team Udayavani, Oct 23, 2019, 12:20 AM IST
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿರುವ ಭಾರತ ಒಟ್ಟು ಐದು ಪಂದ್ಯಗಳಲ್ಲಿ ಭರ್ತಿ 240 ಅಂಕ ಕಲೆಹಾಕಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಭದ್ರಗೊಳಿಸಿದೆ.
ಮೂರು ಪಂದ್ಯಗಳ ಈ ಸರಣಿಯಲ್ಲಿ ಭಾರತ ಒಟ್ಟು 120 ಅಂಕ ಗಳಿಸಿದೆ. ಪ್ರತಿ ಟೆಸ್ಟ್‌ಗೆ 40 ಅಂಕ ನೀಡಲಾಗುತ್ತದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದರೆ ಪ್ರತಿ ಟೆಸ್ಟ್ ಗೆ 60 ಅಂಕ ನೀಡಲಾಗುತ್ತದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದರೆ ಪ್ರತಿ ಟೆಸ್ಟ್‌ಗೆ ತಲಾ 24 ಅಂಕ ನೀಡಲಾಗುತ್ತದೆ ಎಂದು ಐಸಿಸಿ ಪ್ರಕಟನೆಯಲ್ಲಿ ತಿಳಿಸಿದೆ.
ಟೆಸ್ಟ್ ಚಾಂಪಿಯನ್‌ಶಿಪ್ ಆರಂಭ ವಾದ ಬಳಿಕ ಭಾರತ ಅದ್ಭುತ ನಿರ್ವಹಣೆ ನೀಡುತ್ತ ಬಂದಿದೆ. ವೆಸ್ಟ್ ಇಂಡೀಸ್‌ನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಟೀಮ್ ಇಂಡಿಯಾ ವೈಟ್‌ವಾಶ್ ಸಾಧನೆ ಮಾಡಿ ಮೆರೆದಿತ್ತು. ಒಟ್ಟಾರೆಯಾಗಿ ಆಡಿದ ಎರಡು ಟೆಸ್ಟ್ ಸರಣಿಗಳಲ್ಲಿ (ಒಟ್ಟು 5 ಪಂದ್ಯ) ಭಾರತ ಗರಿಷ್ಠ 240 ಅಂಕಗಳನ್ನು ಕಲೆಹಾಕಿದೆ.
ಭಾರತದ ಸರಣಿಯೊಂದಿಗೆ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಕಾಲಿರಿಸಿತ್ತು. ಆದರೆ ಭಾರತದ ನೆಲದಲ್ಲಿ ಹೀನಾಯ ಸೋಲಿಗೆ ಗುರಿಯಾಗಿದೆ. ಅಂಕ ಖಾತೆ ತೆರೆಯಲಿಲ್ಲ.
ಬಾಂಗ್ಲಾ ವಿರುದ್ಧವೂ ಪ್ರಾಬಲ್ಯ
ಟೆಸ್ಟ್‌ನಲ್ಲಿ ನಂ.1 ತಂಡವಾದ ಭಾರತ ಮುಂದಿನ ಸರಣಿಯನ್ನು ಬಾಂಗ್ಲಾ ವಿರುದ್ಧ ಆಡಲಿದೆ. ತವರಿನಲ್ಲೇ ನಡೆ ಯುವ ಈ ಎರಡು ಪಂದ್ಯಗಳ ಸರಣಿಯನ್ನು ಗೆದ್ದು ಅಂಕಗಳನ್ನು ಇನ್ನಷ್ಟು ಹೆಚ್ಚಿಸುವ ಇರಾದೆಯಲ್ಲಿದೆ. ಈ ಸರಣಿ ನ. 14ರಿಂದ ಆರಂಭವಾಗಲಿದೆ. ಬಾಂಗ್ಲಾ ವಿರುದ್ಧ ಭಾರತ ಪ್ರಾಬಲ್ಯ ಮೆರೆಯುವುದು ಖಚಿತವೆಂದು ಹೇಳಬಹುದು. ಆದರೆ ಟೆಸ್ಟ್ ಪಂದ್ಯ ವಾಗಿರುವ ಕಾರಣ ಬಾಂಗ್ಲಾ ತೀವ್ರ ಪೈಪೋಟಿ ನೀಡುವ ನಿರೀಕ್ಷೆಯಿದೆ.
ಶ್ರೀಲಕಾ ಮತ್ತು ನ್ಯೂಜಿಲ್ಯಾಂಡ್ 60 ಅಂಕಗಳೊಂದಿಗೆ ಅನಂತರದ ಸ್ಥಾನದಲ್ಲಿವೆ. ಈ ಎರಡು ತಂಡಗಳ ನಡುವಣ ಎರಡು ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲದಲ್ಲಿ ಅಂತ್ಯಗೊಂಡಿತ್ತು. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯ ತಲಾ 56 ಅಂಕ ಗಳಿಸಿವೆ. ಈ 2 ತಂಡಗಳ ನಡುವಣ 5 ಪಂದ್ಯಗಳ ಆ್ಯಶಸ್ ಸರಣಿ 2-2 ಅಂತರದಿಂದ ಸಮಬಲದಲ್ಲಿ ಅಂತ್ಯಗೊಂಡಿತ್ತು.
2021ರಲ್ಲಿ ಫೈನಲ್
ಲೀಗ್ ಹಂತದ ಅಗ್ರ ಎರಡು ತಂಡಗಳು 2021ರ ಜೂನ್‌ನಲ್ಲಿ ಇಂಗ್ಲೆಂಡಿನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಗೆದ್ದ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಸ್ ಪಟ್ಟ ಪಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.