Asian Games ಎಂಬ ಮಾಯಾಲೋಕ ; ಇಂದು ಸಂಜೆ 5.30ಕ್ಕೆ ಉದ್ಘಾಟನೆ
ಸೋನಿ ಸ್ಪೋರ್ಟ್ಸ್ ನಲ್ಲಿ ನೇರ ಪ್ರಸಾರ
Team Udayavani, Sep 23, 2023, 6:45 AM IST
ಹ್ಯಾಂಗ್‌ಝೂ: “ಏಷ್ಯ ಖಂಡದ ಒಲಿಂಪಿಕ್ಸ್’ ಎಂದೇ ಖ್ಯಾತಿ ಪಡೆದಿರುವ ಏಷ್ಯನ್ ಗೇಮ್ಸ್‌ನ 19ನೇ ಆವೃತ್ತಿ ಶನಿವಾರ ಚೀನದ ಹ್ಯಾಂಗ್‌ಝೂನಲ್ಲಿ ಅಧಿಕೃತವಾಗಿ ಆರಂಭಗೊಳ್ಳಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5.30ಕ್ಕೆ ಆರಂಭಗೊಳ್ಳಲಿರುವ ಪಥಸಂಚಲನ ದಲ್ಲಿ ಹರ್ಮನ್‌ಪ್ರೀತ್ ಸಿಂಗ್ ಮತ್ತು ಲವ್ಲಿನಾ ಬೊರ್ಗೊಹೇನ್ ತ್ರಿವರ್ಣ ಧ್ವಜಧಾರಿಗಳಾಗಿ ಸಾಗಲಿದ್ದಾರೆ.
“ಬಿಗ್ ಲೋಟಸ್’ ಎಂದು ಕರೆಯ ಲ್ಪಡುವ, 80 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ, ಕ್ವಿಂಟಾಂಗ್ ನದಿ ತೀರದ “ಹ್ಯಾಂಗ್‌ಝೂ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂ’ನಲ್ಲಿ ಏಷ್ಯನ್ ಗೇಮ್ಸ್ ಉದ್ಘಾಟನ ಸಮಾ ರಂಭ ರಂಗೇರಿಸಿಕೊಳ್ಳಲಿದೆ. ಚೀನದ ಸಂಸ್ಕೃತಿ-ಸಂಪ್ರದಾಯಯದ ಜತೆಗೆ ಆಧುನಿಕ ಚೀನದ ವೈಭವವಿಲ್ಲಿ ಅನಾವರಣಗೊಳ್ಳಲಿದೆ. ಡಿಜಿಟಲ್ ಟಾರ್ಚ್‌ಗಳ ಮಾಯಾಲೋಕ, ತ್ರೀಡಿ ಆ್ಯನಿಮೇಶನ್ ವೈವಿಧ್ಯ ಕೂಡ ವರ್ಣ ವೈಭವವನ್ನು ತೆರೆದಿಡಲಿದೆ.
ಮುಖ್ಯ ಅತಿಥಿ
ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಏಷ್ಯನ್ ಗೇಮ್ಸ್ ಉದ್ಘಾಟನ ಸಮಾರಂಭದ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಂಬೋಡಿಯಾದ ರಾಜ ನೊರೋದೋಮ್ ಸಿಹಾಮೋನಿ, ಸಿರಿಯಾದ ಅಧ್ಯಕ್ಷ ಬಾಶರ್ ಅಲ್ ಅಸದ್, ಹಾಂಕಾಂಗ್ ಚೀನದ ಮುಖ್ಯಸ್ಥ ಜಾನ್ ಕೀ ಕಾ ಶಿಯು, ರಿಪಬ್ಲಿಕ್ ಆಫ್ ಕೊರಿಯಾದ ಪ್ರಧಾನಿ ಹಾನ್ ಡಕ್ ಸೂ ಮೊದಲಾದವರು ಈ ಸಮಾರಂಭದಲ್ಲಿ ಉಪಸ್ಥಿತರಿರುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Mangaluru: ವೆನ್ಲಾಕ್ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.