ವೈದ್ಯರ ರಾಷ್ಟ್ರೀಯ ಕ್ರಿಕೆಟ್ ಕೂಟ ಆರಂಭ
Team Udayavani, Apr 12, 2018, 6:00 AM IST
ಉಡುಪಿ: ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಆಸರೆಯಲ್ಲಿ ಮಾಹೆ-ಪರಿಗಣಿತ ವಿಶ್ವ ವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ ರಾಷ್ಟ್ರೀಯ ವೈದ್ಯರುಗಳ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ “ಸಿಲ್ವರ್ ಕ್ರಿಕೆಟ್ ಲೀಗ್ -2018 (ಎಸ್.ಸಿ.ಎಲ್.) ಮಣಿಪಾಲದಲ್ಲಿ ಬುಧವಾರ ಆರಂಭಗೊಂಡಿತು. ದಿನದ ಮೊದಲ ಪಂದ್ಯದಲ್ಲಿ ದಾವಣಗೆರೆ ಬ್ಲೆಂಡೆಡ್ ಕನ್ನಡಿಗಾಸ್ ತಂಡವು ಕ್ಯಾಲಿಕಟ್ ಹರಿಕೇನ್ ತಂಡದ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿತು. 2ನೇ ಪಂದ್ಯದಲ್ಲಿ ಮುಂಬಯಿಯ ತುಂಗಾ ತಂಡದ ವಿರುದ್ಧ ಪದ್ಮಾಲಯ ಸ್ಟಾರ್ ಪುಣೆ ತಂಡ 4 ವಿಕೆಟ್‌ಗಳ ಜಯ ದಾಖಲಿಸಿತು.
ಪಂದ್ಯಾವಳಿಯನ್ನು ಮಾಹೆ ಪರಿಗಣಿತ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಮತ್ತು ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಗೌರವಾಧ್ಯಕ್ಷ ಡಾ| ಎಚ್.ಎಸ್. ಬಲ್ಲಾಳ್ ಅವರು ಉದ್ಘಾಟಿಸಿ, ವೈದ್ಯರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ವೃತ್ತಿಜೀವನಕ್ಕೆ ಹೊಸ ಹುರುಪು ದೊರೆಯುತ್ತದೆ ಎಂದರು. ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಡಾ| ಕೃಷ್ಣ ಪ್ರಸಾದ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೈದ್ಯ ವೃತ್ತಿ ನಡೆಸಬೇಕಾದರೆ ಭಯಪಡಬೇಕಾದ ಸಂದರ್ಭ ಎದುರಿಗಿದೆ. ಅಲ್ಲಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಭಯದ ವಾತಾವರಣದಲ್ಲಿ ಕೆಲಸ ಮಾಡುವ ವೈದ್ಯರಿಗೆ ಈ ರೀತಿಯ ಪಂದ್ಯಾಟಗಳು ನಿರಾಳತೆಯನ್ನು ಒದಗಿಸಬಲ್ಲದು ಎಂದರು. ಡಾ| ನವೀನ್ ಪಾಟೀಲ್, ಮೆಡಿ ಲ್ಯಾಬ್ ಸಂಸ್ಥೆಯ ಆಡಳಿತ ನಿರ್ದೇಶಕ ಜ್ಯೋತಿಪ್ರಸಾದ್ ಹೆಗ್ಡೆ ಅವರು ಮುಖ್ಯಅತಿಥಿಯಾಗಿದ್ದರು. ಮಾಹೆಯ ಕ್ರೀಡಾ ಕಾರ್ಯದರ್ಶಿ ಡಾ| ವಿನೋದ್ ನಾಯಕ್ ಸ್ವಾಗತಿಸಿ, ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಬಾಲಕೃಷ್ಣ ಪರ್ಕಳ ವಂದಿಸಿದರು. ಡಾ| ಅಜಯ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.