ಸೈನಾಗೆ ಕಾಡಿದ ಗಾಯದ ಸಮಸ್ಯೆ
Team Udayavani, Jul 24, 2019, 6:07 AM IST
ಹೈದರಾಬಾದ್: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಕೊನೆಯ ಕ್ಷಣದಲ್ಲಿ ಜಪಾನ್ ಓಪನ್ ಬ್ಯಾಡ್ಮಿಂಟನ್ ಕೂಟದಿಂದ ಹಿಂದೆ ಸರಿದಿದ್ದಾರೆ.
ಕೆಲವು ಸಮಯದಿಂದ ಸೈನಾ ನೆಹ್ವಾಲ್ ಅವರಿಗೆ ಗಾಯಗಳೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿವೆ. ಹೀಗಾಗಿ ಸೈನಾ ಕಳೆದ ವಾರ ನಡೆದ ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ನಲ್ಲೂ ಆಡಿರಲಿಲ್ಲ. ಇದೀಗ ಜಪಾನ್ ಕೂಟದಿಂದಲೂ ದಿಢೀರ್ ಎಂದು ಹಿಂದಕ್ಕೆ ಸರಿದಿದ್ದಾರೆ.
ಮೂಲಗಳ ಪ್ರಕಾರ ವಿಶ್ವದ 8ನೇ ರ್ಯಾಂಕಿನ ಸೈನಾ ಮುಂದಿನ ತಿಂಗಳಲ್ಲಿ ನಡೆಯಲಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷದ ಆರಂಭದಲ್ಲಿ ಸೈನಾ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದರು. ಈ ಋತುವಿನಲ್ಲಿ ಪ್ರಶಸ್ತಿ ಗೆದ್ದ ಏಕೈಕ ಆಟಗಾರ್ತಿ ಅವರಾಗಿದ್ದಾರೆ. ಆದರೆ ಈ ಪ್ರಶಸ್ತಿ ಬಳಿಕ ಅವರಿಗೆ ಗಾಯದ ಸಮಸ್ಯೆ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.