“ಒಲಿಂಪಿಕ್ಸ್ ಮತ್ತೆ ಮುಂದೂಡಲ್ಪಟ್ಟರೆ ಪ್ಲಾನ್ ಬಿ ಇಲ್ಲ: ರದ್ದಾಗಲಿದೆಯೇ ಮಹಾ ಕ್ರೀಡಾಕೂಟ?
Team Udayavani, Apr 16, 2020, 10:22 AM IST
ಟೋಕ್ಯೋ: ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಇನ್ನೊಂದು ಸಲ ಮುಂದೂಡಬೇಕಾದ ಪ್ರಮೇಯ ಒದಗಿದರೆ ಯಾವುದೇ ಪರ್ಯಾಯ ಯೋಜನೆ (ಪ್ಲಾನ್ ಬಿ) ಇಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.
ಈಗಿನ ಯೋಜನೆಯಂತೆ ಮುಂದೂಡಲ್ಪಟ್ಟ ಒಲಿಂಪಿಕ್ ಕ್ರೀಡಾಕೂಟವು 2021ರ ಜುಲೈ 23ರಂದು ಆರಂಭವಾಗಲಿದೆ. ಆಗಸ್ಟ್ 24ರಿಂದ ಪ್ಯಾರಾಲಿಂಪಿಕ್ಸ್ ನಡೆಯಲಿದೆ. ಈ ಬೇಸಿಗೆಯಲ್ಲಿ ಒಲಿಂಪಿಕ್ಸ್ ಆಯೋಜಿಸಲು ಸಾಧ್ಯವಿಲ್ಲ ಎನ್ನುವುದು ಖಚಿತವಾದ ಬಳಿಕ ಮುಂದೂಡಿ, ಹೊಸ ದಿನಾಂಕವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಕಳೆದ ತಿಂಗಳು ನಿಗದಿಪಡಿಸಿತ್ತು ಎಂದು ಟೋಕ್ಯೋ ಒಲಿಂಪಿಕ್ಸ್ನ ವಕ್ತಾರ ಮಸಾ ಟಕಾಯ ಹೇಳಿದ್ದಾರೆ.
ಮುಂದಿನ ಬೇಸಿಗೆಗಿಂತ ಹೆಚ್ಚು ಅವಧಿಗೆ ಕ್ರೀಡಾಕೂಟವನ್ನು ಮುಂದೂಡುವುದು ಸಾಧ್ಯವಿಲ್ಲ ಎಂದು ಜಪಾನ್ ಪ್ರಧಾನಿ ಶಿಂಜೊ ಅಬೆ ಹಾಗೂ ಐಒಸಿ ಅಧ್ಯಕ್ಷ ಥಾಮಸ್ ಬಾಕ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ನಿಗದಿಯಂತೆ ಒಲಿಂಪಿಕ್ಸ್ ಆಯೋಜಿಸಲು ನಾವು ಸಿದ್ಧತೆ ಕೈಗೊಳ್ಳುತ್ತಿದ್ದೇವೆ ಎಂದು ಮಸಾ ಟಕಾಯ ಸ್ಪಷ್ಟಪಡಿಸಿದ್ದಾರೆ.
ಹೆಚ್ಚುವರಿ ವೆಚ್ಚದ ಚಿಂತೆಯಲ್ಲಿ ಜಪಾನ್: ಸುಮಾರು 11 ಸಾವಿರ ಕ್ರೀಡಾಪಟುಗಳು, 4,400 ಪ್ಯಾರಾಲಿಂಪಿಕ್ ಪಟುಗಳು ಹಾಗೂ 206 ದೇಶಗಳ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರಯಾಣ, ವಸತಿ, ಪ್ರೇಕ್ಷಕರು ಹಾಗೂ ಕ್ರೀಡಾಂಗಣ ಮರು ಸಿದ್ಧತೆಗಾಗಿ ಜಪಾನ್ 43,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.