ಟೀಮ್ ಇಂಡಿಯಾದ ಮಿಂಚಿನ ದಾಳಿ:104 ರನ್ ಗೆ ಹೋಲ್ಡರ್ ಪಡೆ ಆಲೌಟ್!
Team Udayavani, Nov 1, 2018, 3:50 PM IST
ತಿರುವನಂತಪುರಂ: ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆಯುತ್ತಿರುವ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ ಗಳ ಮಿಂಚಿನ ದಾಳಿಗೆ ಕೆರೆಬಿಯನ್ನರು ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ 31.5 ಓವರ್ ಗಳಲ್ಲಿ ಕೇವಲ 104 ರನ್ನಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ.
ಮೊದಲ ಓವರ್ ನಲ್ಲೆ ಕಿರನ್ ಪೊವೆಲ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ವಿಂಡೀಸ್ ನಿರಂತರ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. ನಾಯಕ ಜೇಸನ್ ಹೋಲ್ಡರ್ (25 ರನ್), ಮರ್ಲಾನ್ ಸ್ಯಾಮುವೆಲ್ಸ್ (24 ರನ್), ರೋವನ್ ಪೊವೆಲ್(16 ರನ್ ) ಮಾತ್ರ ರನ್ ಗಳಿಕೆಯಲ್ಲಿ ಎರಡಂಕೆ ದಾಟಿದವರು .
ಈ ಪಂದ್ಯದಲ್ಲಿ ಭಾರತದ ಬೌಲರ್ ಗಳು ನಿಖರ ದಾಳಿ ನಡೆಸಿದರು. ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾಹ್, ಖಲೀಲ್ ಅಹಮದ್ ತಲಾ ಎರಡು ವಿಕೆಟ್ ಪಡೆದರು. ಒಂದೊಂದು ವಿಕೆಟ್ ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್ ಪಾಲಾಯಿತು.
5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರ ಅಂತರದಿಂದ ಮುನ್ನಡೆಯಲ್ಲಿದೆ. ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಟೈ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.