ಟಿ20 ವಿಶ್ವಕಪ್ ಗೆ ಆಸೀಸ್ ತಂಡ ಪ್ರಕಟ: ಸ್ಥಾನ ಪಡೆದ ಸಿಂಗಾಪುರದ ಸ್ಪೋಟಕ ಬ್ಯಾಟರ್
Team Udayavani, Sep 1, 2022, 9:44 AM IST
ಮೆಲ್ಬರ್ನ್: ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ತಮ್ಮದೇ ನೆಲದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೂಟಕ್ಕೆ ಆಸ್ಟ್ರೇಲಿಯಾ ತನ್ನ ತಂಡ ಪ್ರಕಟಿಸಿದೆ. ಬಹುನಿರೀಕ್ಷಿತ ಸಿಂಗಾಪುರದ ಆಟಗಾರ ಟಿಮ್ ಡೇವಿಡ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಅಲ್ಲದೆ ಟಿಮ್ ಡೇವಿಡ್ ಸೆಪ್ಟೆಂಬರ್ ಮಧ್ಯದಲ್ಲಿ ಭಾರತ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಗೂ ಆಯ್ಕೆಯಾಗಿದ್ದಾರೆ. ಈ ಸರಣೀಯನ್ನು ಟಿ20 ವಿಶ್ವಕಪ್ ಕೂಟಕ್ಕೆ ಇದು ಸಿದ್ಧತೆ ಎಂದೇ ಪರಿಗಣಿಸಲಾಗಿದೆ. ಅಲ್ಲದೆ ಈ ಸರಣಿಯಲ್ಲಿ ಟಿಮ್ ಡೇವಿಡ್ ಬಹುತೇಕ ಆಸ್ಟ್ರೇಲಿಯಾ ಪರ ಮೊದಲ ಬಾರಿ ಕಣಕ್ಕಿಳಿಯಲಿದ್ದಾರೆ.
ಸಿಂಗಾಪುರ ಮೂಲದ 26 ವರ್ಷದ ಆಟಗಾರ ಟಿಮ್ ಡೇವಿಡ್, ವಿಶ್ವದ ಹಲವೆಡೆ ಟಿ20 ಲೀಗ್ ಗಳಲ್ಲಿ ಆಡಿದ್ದಾರೆ. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಆಡುವ ಡೇವಿಡ್, ಸಿಂಗಾಪುರ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ.
ಟಿಮ್ ಡೇವಿಡ್ ಆಯ್ಕೆಯ ಬಳಿಕ ಆಡುವ ಬಳಗದಲ್ಲಿ ಅವರು ಯಾರ ಜಾಗ ತುಂಬುತ್ತಾರೆ ಎನ್ನುವುದೇ ಈಗ ಸಮಸ್ಯೆಯಾಗಿದೆ. ಈ ವರ್ಷದ ಆರಂಭದಲ್ಲಿ ಆಂಡ್ರ್ಯೂ ಮೆಕ್‌ಡೊನಾಲ್ಡ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ ಸ್ಟೀವನ್ ಸ್ಮಿತ್ ಗೆ ಹೆಚ್ಚು ಆಕ್ರಮಣಕಾರಿ ಆಟವಾಡಲು ಸ್ವಾತಂತ್ರ್ಯ ನೀಡಲಾಗಿದೆ. ಆದರು ಡೇವಿಡ್ ಅವರು ಸ್ಮಿತ್ ಬದಲಿಗೆ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ:‘ಬಿಜೆಪಿ-ಮುಕ್ತ ಭಾರತ’ಕ್ಕೆ ಕರೆ ನೀಡಿದ ಕೆಸಿಆರ್-ನಿತೀಶ್ ಕುಮಾರ್ ಭೇಟಿ: ಏನಿದು ಪ್ರಮುಖ ರಂಗ?
ಭಾರತದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಗೆ ರೆಸ್ಟ್ ನೀಡಲಾಗಿದೆ. ಈ ಸರಣಿಗೆ ಕ್ಯಾಮರೂನ್ ಗ್ರೀನ್ ಸ್ಥಾನ ಪಡೆದಿದ್ದಾರೆ.
ಭಾರತ ವಿರುದ್ಧ ತಂಡ: ಆರನ್ ಫಿಂಚ್ (ನಾ), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಆಶ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಕೇನ್ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಆಡಂ ಝಂಪಾ.
ಆಸ್ಟ್ರೇಲಿಯಾ ವಿಶ್ವಕಪ್ ತಂಡ: ಆ್ಯರನ್ ಫಿಂಚ್ (ನಾ), ಪ್ಯಾಟ್ ಕಮ್ಮಿನ್ಸ್, ಆ್ಯಡಂ ಝಂಪಾ, ಟಿಮ್ ಡೇವಿಡ್, ಡೇವಿಡ್ ವಾರ್ನರ್, ಆ್ಯಸ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.