ಕ್ರೀಡಾಂಗಣಗಳ ಕಾಮಗಾರಿ ವಿಳಂಬ: ಒಲಿಂಪಿಕ್ ಸಿದ್ಧತೆಗೆ ಅಡ್ಡಿಯಿಲ್ಲ
Team Udayavani, Jul 29, 2018, 12:00 PM IST
ಟೋಕಿಯೊ: ಜಪಾನ್‌ನ ಟೋಕಿಯೊದಲ್ಲಿ 2020ರಲ್ಲಿ ನಡೆಯ ಲಿರುವ ಒಲಿಂಪಿಕ್ಸ್ ಕೂಟಕ್ಕೆ ಭಾರೀ ಸಿದ್ಧತೆಗಳು ನಡೆಯುತ್ತಿವೆ. ಎರಡು ಪ್ರಮುಖ ಸ್ಥಳಗಳಲ್ಲಿ ಕಾಮಗಾರಿ ಗಳು ವಿಳಂಬವಾಗುತ್ತಿದೆ. ಆದರೆ, ಇದರಿಂದ ಪಂದ್ಯಗಳು, ಪರೀಕ್ಷೆಗಳಿಗೆ ಸಂಬಂಧಿಸಿ ಯಾವುದೇ ಅಡ್ಡಿಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೋಕಿಯೊ ಮಹಾನಗರದ ಆಡಳಿತವು ಕಳೆದ ತಿಂಗಳು ಒಲಿಂಪಿಕ್ ಅಕ್ವಾಟಿಕ್ ಸೆಂಟರ್ ಹಾಗೂ ಸೀ ಫಾರೆಸ್ಟ್ ವಾಟರ್ ವೇ ನಿರ್ಮಾಣ ಎರಡು ತಿಂಗಳು ವಿಳಂಬವಾಗಲಿದೆ ಎಂದು ಘೋಷಿಸಿದೆ. ಆಯೋಜಕರು ಅಭ್ಯಾಸ ಪಂದ್ಯಗಳನ್ನು ಮರುನಿಗದಿ ಮಾಡಬೇಕಾದೀತು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ 2020ರ ಒಲಿಂಪಿಕ್ಸ್ ಕ್ರೀಡಾಕೂಟದ ವೇಳಾಪಟ್ಟಿ ಒಂದಷ್ಟು ಗೊಂದಲ ನಿರ್ಮಾಣವಾಗಿತ್ತು.
ಟೋಕಿಯೊ ಮಹಾನಗರ ಆಡಳಿತ ಒಲಿಂಪಿಕ್ ಅಕ್ವಾಟಿಕ್ಸ್ ಸೆಂಟರ್ ಹಾಗೂ ಸೀ ಫಾರೆಸ್ಟ್ ವಾಟರ್‌ವೆà ನಿರ್ಮಾಣ ಎರಡು ತಿಂಗಳಷ್ಟು ವಿಳಂಬವಾಗುತ್ತದೆ ಎಂದು ತಿಳಿಸಿದ್ದರೂ ಕ್ರೀಡಾಕೂಟದ ವೇಳಾಪಟ್ಟಿ ಅಥವಾ ಆಯೋಜನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಟೋಕಿಯೊ 2020 ಒಲಿಂಪಿಕ್ಸ್ ಮಾಧ್ಯಮ ವಕ್ತಾರ ಮಸಾ ಟಕಾಯಾ ತಿಳಿಸಿದ್ದಾರೆ.
ಯಾವುದೇ ಸಮಸ್ಯೆ ಆಗದು
ರೋಯಿಂಗ್ ಸ್ಪರ್ಧೆಯ ಆತಿಥ್ಯ ವಹಿಸುವ ಸೀ ಫಾರೆಸ್ಟ್ ವಾಟರ್ ವೇ ಮೇ 2019ರ ವೇಳೆಗೆ ಪೂರ್ಣಗೊಳ್ಳಲಿದೆ. ಅಲ್ಲಿ ಆಗಸ್ಟ್‌ನಲ್ಲಿ ಪರೀಕ್ಷಾರ್ಥ ಸ್ಪರ್ಧೆಗಳನ್ನು ಆಯೋಜಿಸಲು ಯಾವ ಅಡ್ಡಿಯೂ ಆಗುವುದಿಲ್ಲ. ಈಜು ಹಾಗೂ ಡೈವಿಂಗ್ ಸ್ಪರ್ಧೆಗಳನ್ನು ನಡೆಸುವ ಒಲಿಂಪಿಕ್ ಅಕ್ವಾಟಿಕ್ಸ್ ಸೆಂಟರ್ ಫೆಬ್ರವರಿ 2020ರಲ್ಲಿ ಪೂರ್ಣಗೊಳ್ಳಲಿದೆ. ಎಪ್ರಿಲ್ ಅಥವಾ ಆ ಬಳಿಕವೇ ಕ್ರೀಡಾಕೂಟ ನಡೆಯುವುದರಿಂದ ಸಮಸ್ಯೆ ಆಗುವುದಿಲ್ಲ. ಕ್ರೀಡಾಪಟುಗಳು ಸಿದ್ಧತೆಯೂ ಅಡ್ಡಿಯಿಲ್ಲ. ಒಟ್ಟಾರೆ ಟೋಕಿಯೋ 2020ರ ಒಲಿಂಪಿಕ್ಸ್ ಆಯೋಜಿಸಲು ಸರ್ವಸನ್ನದ್ಧಗೊಳ್ಳುತ್ತಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯೂ ಇಲ್ಲಿನ ಕಾಮಗಾರಿಗಳ ಗುಣಮಟ್ಟ, ಸಿದ್ಧತೆಯ ವೇಗ ಇತ್ಯಾದಿಗಳ ಕುರಿತಾಗಿ ಮೆಚ್ಚುಗೆಯ ಮಾತುಗಳನ್ನಾಡಿದೆ ಎಂದು ಟಕಾಯಾ ಸ್ಪಷ್ಟಪಡಿಸಿದ್ದಾರೆ. 2020ರ ಒಲಿಂಪಿಕ್ಸ್ ಜುಲೈ 24ರಿಂದ ಆಗಸ್ಟ್ 9ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.