ಒಲಿಂಪಿಕ್ಸ್ ನಲ್ಲಿ ವ್ಯತ್ಯಯವಾಗದು: ಐಒಎ
Team Udayavani, Mar 20, 2020, 6:45 AM IST
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ಅನಿಶ್ಚಿತತೆ ಮುಂದುವರಿದಿದೆ. ಇದನ್ನು ಮುಂದೂಡುವುದು ಅಥವಾ ನಿಲ್ಲಿಸುವುದೇ ಸೂಕ್ತ ಎಂಬ ಅಭಿಪ್ರಾಯ ಸಾರ್ವತ್ರಿಕಗೊಂಡಿದೆ. ಇಂಥ ಸಂದರ್ಭದಲ್ಲಿ ಹೇಳಿಕೆಯೊಂದನ್ನು ನೀಡಿರುವ ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ (ಐಒಎ), ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಯಾವುದೇ ಅಡ್ಡಿಯಾಗದು, ಅದು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದೆ.
“ನಿಜ, ಕೋವಿಡ್ 19 ವೈರಸ್ ವಿಶ್ವಾದ್ಯಂತ ವ್ಯಾಪಿಸಿದೆ. ಆದರೆ ಇದು ಒಂದೆರಡು ತಿಂಗಳಲ್ಲಿ ನಿಯಂತ್ರಣಕ್ಕೆ ಬರುವುದರಲ್ಲಿ ಅನುಮಾನವಿಲ್ಲ. ಚೀನದಲ್ಲಿ ಇದು ಈಗಾಗಲೇ ಹತೋಟಿಗೆ ಬಂದಿದೆ. ಒಲಿಂಪಿಕ್ಸ್ ಆರಂಭಕ್ಕೆ ಇನ್ನೂ 4 ತಿಂಗಳಿವೆ. ಹೀಗಾಗಿ ಈ ಕೂಟ ನಿಗದಿತ ವೇಳೆಯಲ್ಲೇ ನಡೆಯಲಿದೆ ಎಂಬ ವಿಶ್ವಾಸ ನಮ್ಮದು’ ಎಂದು ಐಒಎ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ಆದರೆ ಈ ವಿಷಯದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ (ಐಒಸಿ) ನಿರ್ಧಾರವೇ ಅಂತಿಮ. ಐಒಸಿ ಯಾವ ತೀರ್ಮಾನಕ್ಕೆ ಬರುವುದೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಅದು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿಬೇಕು ಎಂದು ಸೂಚಿಸಿದರೆ, ಯಾವುದೇ ಭೀತಿ ಇದ್ದರೂ ನಾವು ಭಾಗವಹಿಸಲೇಬೇಕಾಗುತ್ತದೆ’ ಎಂಬುದಾಗಿ ಅವರು ಹೇಳಿದ್ದಾರೆ.
ಕೇವಲ ಭಾರತದ ಸಮಸ್ಯೆಯಲ್ಲ
“ಒಲಿಂಪಿಕ್ಸ್ ತಯಾರಿ ಮತ್ತು ಅರ್ಹತೆಗೆ ಕೊರೊನಾದಿಂದ ಭಾರೀ ಹಿನ್ನಡೆಯಾಗಿದೆ. ಆದರೆ ಇದು ಕೇವಲ ಭಾರತದ ಸಮಸ್ಯೆಯಲ್ಲ. ಎಲ್ಲ ದೇಶಗಳೂ ಇದೇ ಸಮಸ್ಯೆಯನ್ನು ಎದುರಿಸುತ್ತಿವೆ. ಹೀಗಾಗಿ ನಮ್ಮ ನಿರೀಕ್ಷೆಯಲ್ಲೇನೂ ಬದಲಾವಣೆ ಇಲ್ಲ, ಟೋಕಿಯೊದಲ್ಲಿ ಭಾರತ ಹತ್ತಕ್ಕೂ ಹೆಚ್ಚು ಪದಕ ಗೆಲ್ಲಲಿದೆ…’ ಎಂದು ಐಒಎ ಅಧಿಕಾರಿ ಪಿಟಿಐ ಜತೆ ಹೇಳಿದ್ದಾರೆ.
ಆದರೆ ಐಒಎ ಅಧಿಕಾರಿಯ ಈ ಹೇಳಿಕೆಗೆ ಭಾರತದ ಕ್ರೀಡಾವಲಯದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಅವರೇನು ನಮ್ಮ ಪ್ರಾಣವನ್ನು ಒತ್ತೆಯಿಟ್ಟು ಟೋಕಿಯೊಗೆ ಕಳುಹಿಸುವರೇ ಎಂಬಂಥ ತೀಕ್ಷ್ಣ ಅಭಿಪ್ರಾಯಗಳು ಕೇಳಿಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.