ತಪ್ಪಿದ ಹ್ಯಾಟ್ರಿಕ್ ನಲ್ಲೂ ಉಮೇಶ್ ಯಾದವ್ ವಿಶಿಷ್ಠ ಸಾಧನೆ
Team Udayavani, Oct 14, 2018, 12:51 PM IST
ಹೈದರಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವಿವಾರ ಭಾರತದ ವೇಗಿ ಉಮೇಶ್ ಯಾದವ್ ವಿಶಿಷ್ಠ ಸಾಧನೆ ಮಾಡಿದ್ದಾರೆ.
ಕೆರಿಬಿಯನ್ನರ ಮೊದಲ ಇನ್ನಿಂಗ್ಸ್ ನ ಕೊನೆಯ ಎರಡು ವಿಕೆಟ್ ಗಳನ್ನು ಸತತ ಎಸೆತಗಳಲ್ಲಿ ಪಡೆದಿದ್ದ ಉಮೇಶ್ ಎರಡನೇ ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ದರೆ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದಂತಾಗುತ್ತಿತ್ತು.
ಉಮೇಶ್ ಯಾದವ್ ಮೊದಲ ಎಸೆತವನ್ನು ಕ್ರೇಗ್ ಬ್ರಾಥ್ ವೇಟ್ ಸಮರ್ಥವಾಗಿ ಎದುರಿಸಿದರು. ಈ ಮೂಲಕ ಉಮೇಶ್ ಹ್ಯಾಟ್ರಿಕ್ ಆಸೆಗೆ ತಣ್ಣೀರೆರಚಿದರು. ಆದರೆ ಎರಡನೇ ಎಸೆತದಲ್ಲಿ ಬ್ರಾಥ್ ವೇಟ್ ವಿಕೆಟ್ ಪಡೆದ ಉಮೇಶ್ ಹೊಸತೊಂದು ದಾಖಲೆಗೆ ತನ್ನ ಹೆಸರು ಸೇರಿಸಿಕೊಂಡರು.
ಈ ಮೂಲಕ ಸತತ 4 ಎಸೆತಗಳಲ್ಲಿ ಮೂರು ವಿಕೆಟ್ ಪಡೆದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ವಿದರ್ಭ ಬೌಲರ್ ಪಾಲಾಯಿತು. ಈ ಹಿಂದೆ 1980 ರ ನ್ಯೂಜಿಲ್ಯಾಂಡ್ ವಿರುದ್ದದ ಸರಣಿಯಲ್ಲಿ ರವಿ ಶಾಸ್ತ್ರೀ ಈ ಸಾಧನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.