ಅಂಡರ್-19 ದ್ವಿತೀಯ ಟೆಸ್ಟ್: ಇಂಗ್ಲೆಂಡ್ 375 ಆಲೌಟ್
Team Udayavani, Feb 23, 2017, 10:26 AM IST
ನಾಗ್ಪುರ: ಭಾರತ ವಿರುದ್ಧ ನಡೆಯುತ್ತಿರುವ ಅಂಡರ್-19 ಯೂತ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಅಂಡರ್-19 ತಂಡವು 375 ರನ್ ಗಳಿಸಿ ಆಲೌಟಾಗಿದೆ.
ಇದಕ್ಕುತ್ತರವಾಗಿ ಭಾರತ ಅಂಡರ್-19 ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ ಮೂರು ವಿಕೆಟ್ ಕಳೆದುಕೊಂಡಿದ್ದು 153 ರನ್ ಗಳಿಸಿದೆ. ಇನ್ನೆರಡು ದಿನಗಳ ಆಟ ಬಾಕಿ ಉಳಿದಿದ್ದು ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಲು ಭಾರತ ಇನ್ನೂ 222 ರನ್ ಗಳಿಸಬೇಕಾಗಿದೆ.
5 ವಿಕೆಟಿಗೆ 243 ರನ್ನುಗಳಿಂದ ದಿನದಾಟ ಆರಂಭಿಸಿದ ಇಂಗ್ಲೆಂಡ್ ತಂಡವನ್ನು ಡೆಲಾÅಯ್ ರಾಲಿನ್ಸ್, ಜ್ಯಾಕ್ಸ್ ಮತ್ತು ಬ್ರೂಕ್ಸ್ ಆಧರಿಸಿದರು. ಈ ಮೂವರ ಉತ್ತಮ ಆಟದಿಂದಾಗಿ ತಂಡದ ಮೊತ್ತ 300ರ ಗಡಿ ದಾಟುವಂತಾಯಿತು. 124 ರನ್ನಿನಿಂದ ಆಟ ಮುಂದುವರಿಸಿದ ರಾಲಿನ್ಸ್ 140 ರನ್ ಗಳಿಸಿ ಔಟಾದರೆ ಜ್ಯಾಕ್ಸ್ 77 ಮತ್ತು ಬ್ರೂಕ್ಸ್ 60 ರನ್ ಹೊಡೆದರು.ಎಚ್ಚರಿಕೆಯ ಆಟವಾಡಿದ ಭಾರತದ ಆರಂಭಿಕರಾದ ಅಭಿಷೇಕ್ ಗೋಸ್ವಾಮಿ ಮತ್ತು ಉತ್ಕರ್ಷ್ ಸಿಂಗ್ ಮೊದಲ ವಿಕೆಟಿಗೆ 68 ರನ್ ಪೇರಿಸಿದರು. ಉತ್ಕರ್ಷ್ 19 ರನ್ ಗಳಿಸಿ ಔಟಾದರೆ ಗೋಸ್ವಾಮಿ 58 ರನ್ ಹೊಡೆ ದರು. ಸೌರಭ್ ಸಿಂಗ್ 43 ರನ್ ಗಳಿಸಿ ಆಡುತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.