Under-19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭಾರತ ಜಯಭೇರಿ
Team Udayavani, Jan 25, 2024, 10:31 PM IST
ಬ್ಲೋಮ್‌ಫಾಂಟೇನ್: ಮುಶೀರ್ ಖಾನ್ ಅವರ ಆಕರ್ಷಕ ಶತಕದಿಂದಾಗಿ ಭಾರತ ತಂಡವು ಐಸಿಸಿ ಅಂಡರ್-19 ವಿಶ್ವಕಪ್ ಕ್ರಿಕೆಟ್ ಕೂಟದ ತನ್ನ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 201 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿ ಸೂಪರ್ ಸಿಕ್ಸ್ ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಂಡಿತು.
ಮುಶೀರ್ ಅವರ ಸೊಗಸಾದ 118 ರನ್ನುಗಳ ನೆರವಿನಿಂದ ಭಾರತವು 7 ವಿಕೆಟಿಗೆ 301 ರನ್ನುಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಐರ್ಲೆಂಡ್ ತಂಡವು ಭಾರತದ ದಾಳಿಗೆ ಕುಸಿದು 29.4 ಓವರ್‌ಗಳಲ್ಲಿ ಕೇವಲ 100 ರನ್ನಿಗೆ ಆಲೌಟಾಯಿತು. ಒಂದು ಹಂತದಲ್ಲಿ ಕೇವಲ 45 ರನ್ನಿಗೆ 8 ವಿಕೆಟ್ ಕಳೆದುಕೊಂಡು ಒದ್ದಾಡುತ್ತಿದ್ದ ಐರ್ಲೆಂಡ್ ತಂಡವನ್ನು ಒಲಿವರ್ ರಿಲೇ ಮತ್ತು ಡೇನಿಯಲ್ ಫೋರ್ಕಿನ್ ಸ್ವಲ್ಪಮಟ್ಟಿಗೆ ಆಧರಿಸುವ ಪ್ರಯತ್ನ ಮಾಡಿದರು. ಇದರಿಂದಾಗಿ ತಂಡದ ಮೊತ್ತ ನೂರು ತಲುಪಲು ಸಾಧ್ಯವಾಯಿತು.
ಸಂಕ್ಷಿಪ್ತ ಸ್ಕೋರು: ಭಾರತ 7 ವಿಕೆಟಿಗೆ 301 (ಮುಶೀರ್ ಖಾನ್ 118, ಉದಯ್ ಸಹರನ್ 75, ಒಲಿವರ್ ರಿಲೇ 55ಕ್ಕೆ 3) ಐರ್ಲೆಂಡ್ 29.4 ಓವರ್‌ಗಳಲ್ಲಿ 100ಕ್ಕೆ ಆಲೌಟ್ (ನಮನ್ ತಿವಾರಿ 53ಕ್ಕೆ 4, ಸೌಮಿ ಪಾಂಡೆ 21ಕ್ಕೆ 3).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.