ನಾಗ್ಪುರ ಗೆಲುವಿನೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮತ್ತಷ್ಟು ಹತ್ತಿರವಾದ ಭಾರತ
Team Udayavani, Feb 11, 2023, 6:00 PM IST
ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್ ಗಳಿಂದ ಸೋಲಿಸಿದೆ. ಈ ಮೂಲಕ ಟೀಂ ಇಂಡಿಯಾ ಶನಿವಾರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ) ಫೈನಲ್ನಲ್ಲಿ ಸ್ಥಾನ ಪಡೆಯುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.
ಮೊದಲ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಕ್ರಮವಾಗಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಐದು ವಿಕೆಟ್ ಪಡೆದರು. ಸ್ಪಿನ್ನರ್ ಗಳ ಸಾಹಸದಿಂದ ಭಾರತವು ಮೂರು ದಿನಗಳಲ್ಲಿ ಆಟ ಮುಗಿಸಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಭಾರತವು ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ತನ್ನ ಗೆಲುವಿನ ಶೇಕಡಾವಾರು ಪ್ರಮಾಣವನ್ನು ಸುಧಾರಿಸಿದೆ.
ಮೊದಲ ಟೆಸ್ಟ್ ಬಳಿಕ 61.67 ಗೆಲುವಿನ ಶೇಕಡಾವಾರು ಹೊಂದಿರುವ ಭಾರತವು ಪ್ರಸ್ತುತ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾದ ನಂತರ ಎರಡನೇ ಸ್ಥಾನದಲ್ಲಿದೆ. ಮೊದಲ ಪಂದ್ಯದ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ಗೆಲುವಿನ ಶೇಕಡಾವಾರು ಶೇಕಡಾ 75.56 ರಿಂದ 70.83 ಕ್ಕೆ ಇಳಿದಿದೆ.
ಕಳೆದ ಕೂಟದ ರನ್ನರ್ ಅಪ್ ಆಗಿರುವ ಭಾರತವು ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಲು ಬಾರ್ಡರ್-ಗವಾಸ್ಕರ್ ಸರಣಿಯ ಉಳಿದ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡನ್ನಾದರೂ ಗೆಲ್ಲಬೇಕಾಗಿದೆ.
ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ, ಡಬ್ಲ್ಯುಟಿಸಿ ಫೈನಲ್ ತಲುಪುವ ಹೊರಗಿನ ಅವಕಾಶವನ್ನು ಹೊಂದಿವೆ.
ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಫೈನಲ್ ರೇಸ್ನಿಂದ ಹೊರಗುಳಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.