![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 27, 2022, 12:12 AM IST
ನ್ಯೂಯಾರ್ಕ್: ಅರ್ಹತಾ ಸುತ್ತಿನ ದ್ವಿತೀಯ ಪಂದ್ಯದಲ್ಲಿ ಯೂಕಿ ಭಾಂಬ್ರಿ ಸೋಲನುಭವಿಸುವ ಮೂಲಕ ಯುಎಸ್ ಓಪನ್ ಗ್ರಾನ್‌ಸ್ಲಾಮ್ ಸಿಂಗಲ್ಸ್ ನಲ್ಲಿ ಭಾರತೀಯರ ಸ್ಪರ್ಧೆ ಇಲ್ಲದಾಗಿದೆ. ಭಾಂಬ್ರಿ ಅವರನ್ನು ಬೆಲ್ಜಿಯಂನ ಜೀಝೂ ಬಗ್ಸ್ 6-3, 6-2 ನೇರ ಸೆಟ್‌ಗಳಲ್ಲಿ ಮಣಿಸಿದರು.
ಇದಕ್ಕೂ ಮುನ್ನ ರಾಮ್‌ಕುಮಾರ್ ರಾಮನಾಥನ್ ಮತ್ತು ಸುಮಿತ್ ನಗಾಲ್ ಕೂಡ ಆರ್ಹತಾ ಸುತ್ತಿನಲ್ಲಿ ಸೋಲನುಭವಿಸಿ ಪ್ರಧಾನ ಸುತ್ತು ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿದ್ದರು. ರಾಮನಾಥನ್ ಅವರನ್ನು ಅಮೆರಿಕದ ಬ್ರುನೊ ಕುಜುಹಾರ 6-3, 7-5ರಿಂದ, ನಗಾಲ್ ಅವರನ್ನು ಕೆನಡಾದ ವಸೆಕ್ ಪಾಸ್ಪಿಸಿಲ್ 7-6 (7-2), 7-5ರಿಂದ ಮಣಿಸಿದ್ದರು.
ಯೂಕಿ ಭಾಂಬ್ರಿ ಕಳೆದ ಸುಮಾರು 3 ವರ್ಷಗಳಿಂದ ನಾನಾ ದೈಹಿಕ ಸಮಸ್ಯೆ, ಶಸ್ತ್ರಚಿಕಿತ್ಸೆಗಳಿಂದಾಗಿ ಸ್ಪರ್ಧಾತ್ಮಕ ಟೆನಿಸ್‌ನಲ್ಲಿ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ. ವರ್ಷಾರಂಭದ ಆಸ್ಟ್ರೇಲಿಯನ್ ಓಪನ್ ಅರ್ಹತಾ ಸುತ್ತಿನಲ್ಲಿ ಆಡಿದ್ದರು. ಅಲ್ಲಿಯೂ ದ್ವಿತೀಯ ಸುತ್ತಿನಲ್ಲೇ ಎಡವಿದ್ದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.