Vijayapura; ಪತ್ನಿಯ ಅಪ್ರಾಪ್ತ ವಯಸ್ಕ ತಂಗಿಯ ರೇಪ್; ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Jul 14, 2023, 8:23 PM IST
ವಿಜಯಪುರ: ತನ್ನ ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ ಎಸಗಿದವನಿಗೆ ಸ್ಥಳೀಯ ವಿಶೇಷ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 26 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಶಿವರಾಜ ಬಸವಂತಪ್ಪ ಬಡಿಗೇರ (29) ಎಂಬಾತ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ವಿಜಯಪುರ ಜಿಲ್ಲೆಯ ಮೂಲದವರಾದರೂ ಸಂತ್ರಸ್ತೆಯ ಕುಟುಂಬದವರು ಕೆಲಸದ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು. 2020 ಮಾರ್ಚ್ ತಿಂಗಳಲ್ಲಿ ಸಂಬಂಧಿಗಳ ಮದುವೆಗಾಗಿ ಬೊಮ್ಮನಹಳ್ಳಿಗೆ ಬಂದಿದ್ದರು.
ಈ ಹಂತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹಾವಳಿ ಇದ್ದ ಕಾರಣ ಬೆಂಗಳೂರಿನ ಮನೆಯಲ್ಲಿ ಅಪ್ತಾಪ್ತ ವಯಸ್ಕ ಮಕ್ಕಳು ಇರುವುದು ಬೇಡವೆಂದು ಬೆಂಗಳೂರಿನಲ್ಲೇ ಇದ್ದ ತಮ್ಮ ಮಗಳ (ಶಿವರಾಜ ಬಡಿಗೇರ) ಮನೆಯಲ್ಲಿ ಅಪ್ರಾಪ್ತ ವಯಸ್ಕ ಮಗಳನ್ನು ಬಿಡಲಾಗಿತ್ತು.
2020 ಎಪ್ರಿಲ್ 18 ರಂದು ತನ್ನ ಪತ್ನಿ ಮನೆಯಲ್ಲಿ ಇಲ್ಲದಿರುವುದನ್ನು ನೋಡಿದ ಶಿವರಾಜ ತನ್ನ ಪತ್ನಿಯ ತಂಗಿಯ ಮೆಲೆ ಅತ್ಯಾಚಾರ ಎಸಗಿದ್ದಲ್ಲದೇ, ಘಟನೆ ಕುರಿತು ಮನೆಯಲ್ಲಿ ಯಾರಿಗಾದರೂ ಹೇಳಿದರೆ ನಿಮ್ಮ ಕುಟುಂದವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಕೋವಿಡ್ ಕಾರಣಕ್ಕೆ ಕುಟುಂಬದವರೆಲ್ಲ ಬೊಮ್ಮನಹಳ್ಳಿಗೆ ಮರಳಿದಾಗಲೂ ಶಿವರಾಜ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದ. ಆಗ ವಿಷಯ ಬಾಲಕಿಯ ಮನೆಯವರಿಗೆ ಗೊತ್ತಾಗಿ, ಗ್ರಾಮಸ್ತರ ಸಮ್ಮುಖದಲ್ಲಿ ಬುದ್ದಿವಾದ ಹೇಳಿದ್ದರು. ಆದರೆ ಅತ್ಯಾಚಾರ ಎಸಗಿದ ಶಿವರಾಜ, ಹೆಂಡತಿಯ ತಂಗಿಯಾದ ಸಂತ್ರಸ್ತೆಯನ್ನು ತನಗೆ ಮದುವೆ ಮಾಡಿಕೊಡುವಂತೆ ಪಟ್ಟು ಹಿಡಿದಿದ್ದ.
ಇದರಿಂದಾಗಿ ಸಂತ್ರಸ್ತೆಯ ತಾಯಿ ಲಕ್ಷ್ಮೀ ಹಟ್ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತಾಳೀಕೋಟೆ ಪೊಲೀಸರು, ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪ ರುಜುವಾದ ಕಾರಣ ವಿಜಯಪುರ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ರಾಮ ನಾಯಕ ಇವರು ಅತ್ಯಾಚಾರ ಕೃತ್ಯದ ಎಸಗಿದ ಶಿವರಾಜ ಬಡಿಗೇರಗೆ ಜೀವಾವಧಿ ಶಿಕ್ಷೆ ಹಾಗೂ 26 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕರಾದ ವಿ.ಜಿ.ಹಗರಗೊಂಡ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.