ವಿಕ್ರಮ್ ರಾಠೊಡ್ ಬ್ಯಾಟಿಂಗ್ ಕೋಚ್
ಭರತ್ ಅರುಣ್ , ಆರ್. ಶ್ರೀಧರ್ ಮುಂದುವರಿಕೆ
Team Udayavani, Aug 23, 2019, 5:01 AM IST
ಮುಂಬಯಿ: ಮಾಜಿ ಕ್ರಿಕೆಟಿಗ ವಿಕ್ರಮ್ ರಾಠೊಡ್ ಅವರನ್ನು ಟೀಮ್ ಇಂಡಿಯಾದ ನೂತನ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆ ಮಾಡಲಾಗಿದೆ. ಅವರು ಸಂಜಯ್ ಬಂಗಾರ್ ಸ್ಥಾನವನ್ನು ತುಂಬಲಿದ್ದಾರೆ. ಆದರೆ ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಭರತ್ ಅರುಣ್ ಮತ್ತು ಆರ್. ಶ್ರೀಧರ್ ಮುಂದುವರಿಯಲಿದ್ದಾರೆ.
ಎಂ.ಎಸ್.ಕೆ. ಪ್ರಸಾದ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಗುರುವಾರ ಈ ಮೂವರ ಹೆಸರುಗಳನ್ನು ಶಿಫಾರಸು ಮಾಡಿತು. ಸ್ವಹಿತಾಸಕ್ತಿ ಸಮಸ್ಯೆ ಇಲ್ಲ ಎಂಬುದು ಖಾತ್ರಿಗೊಂಡ ಬಳಿಕ ಈ ಹೆಸರನ್ನು ಅನು ಮೋದಿಸಲಾಯಿತು. ಬಿಸಿಸಿಐ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ರಾಹುಲ್ ಜೊಹ್ರಿ ಇದನ್ನು ಮಾಧ್ಯಮಗಳಿಗೆ ತಿಳಿಸಿದರು.
50ರ ಹರೆಯದ, ಪಂಜಾಬ್‌ನ ವಿಕ್ರಮ್ ರಾಠೊಡ್ 1996-97ರ ಅವಧಿಯಲ್ಲಿ ಭಾರತದ ಪರ 6 ಟೆಸ್ಟ್ ಮತ್ತು 7 ಏಕದಿನ ಪಂದ್ಯಗಳನ್ನಾಡಿದ್ದಾರೆ. 146 ಪ್ರಥಮ ದರ್ಜೆ ಪಂದ್ಯಗಳಿಂದ 11,473 ರನ್ ಪೇರಿಸಿದ್ದಾರೆ. ಸಂದೀಪ್ ಪಾಟೀಲ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ರಾಠೊಡ್ ಸದಸ್ಯನೂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.