Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
Team Udayavani, Dec 24, 2024, 12:13 PM IST
ಮುಂಬಯಿ: ಕ್ರೀಡಾ ಲೋಕದಲ್ಲಿ ತಮ್ಮದೇ ಆದ ಸಾಧನೆಯಿಂದ ಗುರುತಿಸಿಕೊಂಡಿರುವ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ – ಕ್ರಿಕೆಟಿಗ ಮೊಹಮ್ಮದ್ ಶಮಿ ( Mohammed Shami) ಜತೆಯಾಗಿ ಹಾಲಿಡೇ ಮೂಡ್‌ನಲ್ಲಿ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್ (Viral) ಆಗಿದೆ.
ಸಾನಿಯ ಮಿರ್ಜಾ(Sania Mirza) ಪತಿ ಶೋಯೆಬ್ ಮಲಿಕ್ ಅವರಿಂದ ಕೆಲ ತಿಂಗಳ ಹಿಂದೆ ದೂರವಾಗಿದ್ದಾರೆ. ಶೋಯೆಬ್ ಮಲಿಕ್ ಬೇರೆ ವಿವಾಹ ಕೂಡ ಆಗಿದ್ದಾರೆ. ಇತ್ತ ಶಮಿ ಕೂಡ ತಮ್ಮ ಪತ್ನಿಯಿಂದ ದೂರವಾಗಿದ್ದಾರೆ.
ಈ ನಡುವೆ ಕೆಲ ಸಮಯದ ಹಿಂದಷ್ಟೇ ಶಮಿ ಮತ್ತು ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರು ಮದುವೆಯಾಗಲಿದ್ದಾರೆ ಎಂದು ವದಂತಿ ಹಬ್ಬಿತ್ತು. ಈ ವಿಚಾರ ಎಲ್ಲೆಡೆ ಹರಿದಾಡಿ ಕೊನೆಗೆ ಶಮಿ ಅವರೇ ಇದಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು.
ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದನ್ನು ತಡೆಯಲು ಜನರನ್ನು ಕೇಳಿಕೊಂಡು, ಮೀಮ್ ಗಳು ಮನರಂಜನೆಯನ್ನು ನೀಡಬಹುದಾದರೂ ಅವು ಹಾನಿಕಾರಕವೂ ಆಗಿರಬಹುದು ಎಂದು ಹೇಳಿದ್ದರು.
ಸಾಮಾಜಿಕ ಜಾಲತಾಣಗಳೊಂದಿಗೆ ಎಲ್ಲರೂ ಜವಾಬ್ದಾರರಾಗಿರಬೇಕು, ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದನ್ನು ತಡೆಯಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದರು.
ಇದೀಗ ಸಾನಿಯಾ ಮಿರ್ಜಾ ಹಾಗೂ ಮೊಹಮ್ಮದ್ ಶಮಿ ಅವರು ಜತೆಯಾಗಿರುವ ಫೋಟೋಗಳು ವೈರಲ್ ಆಗಿದೆ.
ಸಾನಿಯಾ ಹಾಗೂ ಶಮಿ ಅವರು ಜತೆಯಲ್ಲಿ ದುಬೈಯಲ್ಲಿರುವ ಕೆಲ ಫೋಟೋಗಳಯ ವೈರಲ್ ಆಗಿದೆ. ಸಾನಿಯಾ – ಶಮಿ ಬೀಚ್‌ವೊಂದರಲ್ಲಿ ಜತೆಯಾಗಿ ನಿಂತುಕೊಂಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನೊಂದು ಫೋಟೋದಲ್ಲಿ ಸಾನಿಯಾ – ಶಮಿ ಮದುವೆ ಆದ ಲುಕ್‌ನಲ್ಲಿ ನವ ಜೋಡಿಯಂತೆ ಕಾಣುತ್ತಿದ್ದಾರೆ.
ಈ ಫೋಟೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ ಇದೊಂದು ʼಎಐʼ ರಚಿತ ಫೋಟೊವೆಂದು ಅಸಲಿಯತ್ತು ಗೊತ್ತಾಗಿದೆ.
ಎಐನಿಂದ (AI) ಈ ರೀತಿ ಫೋಟೋಗಳನ್ನು ಕ್ರಿಯೇಟ್ ಮಾಡಿ ವೈರಲ್ ಮಾಡಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಪ್ರಭಾಸ್ ಹಾಗೂ ಅನುಷ್ಕಾ ಅವರ ಫೋಟೋವನ್ನು ಸಹ ಇದೇ ರೀತಿಯಾಗಿ ವೈರಲ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.